ಕೇರಳ:

ಪ್ರವಾಹದ ರುದ್ರ ನರ್ತನಕ್ಕೆ ನಲುಗುತ್ತಿರುವ ಕೇರಳದ ಸ್ಥಿತಿಯನ್ನು ವೈಮಾನಿಕ ಸಮೀಕ್ಷೆಯ ಮೂಲಕ ಇಂದು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದರು.
ಇಂದು ಪ್ರವಾಹಕ್ಕೆ ಸಿಲುಕಿ ನಲುಗಿ ಹೋಗಿರುವ ಕೇರಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಹಾನಿಗೊಳಗಾಗಿರುವ ಪ್ರದೇಶಗಳನ್ನು ವೀಕ್ಷಿಸಿ, ಸಂಪೂರ್ಣ ವಿವರಣೆ ಪಡೆದು, ಪ್ರವಾಹದಿಂದ ಕಂಗಾಲಾಗಿರುವ ಕೇರಳ ರಾಜ್ಯಕ್ಕೆ ತುರ್ತು ಪರಿಹಾರಕ್ಕಾಗಿ ಕೇಂದ್ರ ಸರ್ಕಾರದಿಂದ ಕೂಡಲೇ 500 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದರು.
ಕೇರಳದ ಈಗಾಗಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಕೇಂದ್ರದಿಂದ 100 ಕೋಟಿ ರೂ.ಪ್ಯಾಕೇಜನ್ನು ಬಿಡುಗಡೆ ಮಾಡಿದ್ದಾರೆ.

ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ, ಮೃತಪಟ್ಟ ಪ್ರತಿಯೊಬ್ಬರಿಗೂ ತಲಾ 2 ಲಕ್ಷ ರೂಪಾಯಿ ಘೋಷಣೆ ಮಾಡಲಾಗಿದ್ದು ಅದನ್ನು ಅವರ ಕುಟುಂಬಕ್ಕೆ ನೀಡಲಾಗುವುದು ಹಾಗೂ ಗಂಭೀರ ಗಾಯಗೊಂಡವರಿಗೆ 50,000 ರೂ.ಮೀಸಲಿಡಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.
ಕೊಚ್ಚಿಯಲ್ಲಿ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಪಿ.ಸದಾಶಿವಂ, ಕೇಂದ್ರ ಪ್ರವಾಸೋದ್ಯಮ ಸಚಿವ ಕೆ.ಜೆ. ಆಲ್ಫಾನ್ಸ್ ಅವರೊಂದಿಗೆ ವೈಮಾನಿಕ ಸಮೀಕ್ಷೆ ನಡೆಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








