ಹರಪನಹಳ್ಳಿ:
ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ ವ್ಯಕ್ತಪಡಿಸಲಿದೆ ಎಂದು ಜಾತ್ಯತೀತ ಜನತಾದಳದ ಜಿಲ್ಲಾ ಉಪಾಧ್ಯಕ್ಷ ಎಂ.ಪರಮೇಶ್ವರಪ್ಪ ಹೇಳಿಕೆ ನೀಡಿದ್ದಾರೆ.
`ಚುನಾವಣೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವುದಿಲ್ಲ. ಬದಲಾಗಿ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸಲಿದ್ದಾರೆ’ ಎಂದು ಹೇಳಿರುವ ಬಿಜೆಪಿ ಜಿಲ್ಲಾಧ್ಯಕ್ಷರು ಹೇಳಿಕೆ ಬಾಲಿಶ್ ಮತ್ತು ಸತ್ಯಕ್ಕೆ ದೂರವಾದದ್ದು. ಯಾವುದೇ ಕಾರಣಕ್ಕೂ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಬೆಂಬಲ ನೀಡಲ್ಲ. ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಿ ಅವರ ಗೆಲುವಿಗೆ ಶ್ರಮಿಸಲಿದ್ದಾರೆ.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 17 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿತ್ತು. 2018ರ ವಿಧಾನಸಭಾ ಚುನಾವಣೆಯಲ್ಲಿ ಎಂಟು ಕ್ಷೇತ್ರಗಳಿಂದ ಜೆಡಿಎಸ್ 1.50 ಲಕ್ಷ ಮತ ಗಳಿಸಿತ್ತು. ಸದ್ಯ ಈ ಎಲ್ಲ ಮತಗಳು ಮೈತ್ರಿ ಅಭ್ಯರ್ಥಿ ಪಾಲಾಗಲಿವೆ. ಸತತ ಮೂರು ಬಾರಿ ಆಯ್ಕೆಯಾದ ಸಂಸದ ಸಿದ್ದೇಶ್ವರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸ್ಪಂದಿಸಿಲ್ಲ. ಹೀಗಾಗಿ ಕಾಂಗ್ರೆಸ್ ಪರ ದಾವಣಗೆರೆ ಮಹಾಜನತೆ ಒಲವು ವ್ಯಕ್ತಪಡಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








