ಬೆಂಗಳೂರು:
ಕೊಡಗು ಜಿಲ್ಲೆಯಲ್ಲಿ ಭೂಕಂಪವಾಗುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು, ಇದನ್ನು ಸಾರ್ವಜನಿಕರು ನಂಬಬೇಡಿ ಎಂದು ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ ಮನವಿ ಮಾಡಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯನ್ನು ಭೂಕಂಪವಾಗುತ್ತದೆ ಎನ್ನುವ ಸುಳ್ಳು ಸುದ್ದಿ ವಾಟ್ಸ್ ಆಪ್, ಫೇಸ್‌ಬುಕ್ ಇನ್ನಿತರೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ, ಇಂತಹ ಸುದ್ದಿಗಳನ್ನು ನಂಬಬೇಡಿ, ಕೊಡಗಿನಲ್ಲಿ ಭೂಕಂಪವಾಗುವ ಕುರಿತು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರವಾಗಲಿ ಅಥವಾ ಭೂ ವಿಜ್ಞಾನ ಇಲಾಖೆಯಾಗಲಿ ಯಾವುದೇ ಮುನ್ಸೂಚನೆ ನೀಡಿಲ್ಲ, ಸಾರ್ವಜನಿಕರು ಹೆದರುವ ಅಗತ್ಯವಿಲ್ಲ ಎಂದು ಮನವಿ ಮಾಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ಕೂಡ ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದು, ಇಂತಹ ಸುದ್ಧಿಗಳಿಗೆ ಕಿವಿಗೊಡಬೇಡಿ ಎಂದು ಜನತೆಗೆ ತಿಳಿಸಿದ್ದಾರೆ.