ಬೆಂಗಳೂರು:
ಕೊಡಗು ಜಿಲ್ಲೆಯಲ್ಲಿ ಬಾರಿ ಮಳೆಯಿಂದಾಗಿ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಉಂಟಾಗಿರುವ ಬೆಳೆ ನಷ್ಟದ ವರದಿಯನ್ನು ಇನ್ನು ಮೂರು-ನಾಲ್ಕು ದಿನಗಳಲ್ಲಿ ನೀಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಬೆಂಗಳೂರಿನ ಗೃಹ ಕಚೇರಿಯ ಕೃಷ್ಣಾದಲ್ಲಿ ಇಂದು ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು ಅವರು, ಕೊಡಗು ಜಿಲ್ಲೆಯಲ್ಲಿ ಬಾರಿ ಮಳೆಯಿಂದಾಗಿ ದೊಡ್ಡ ಮಟ್ಟದ ಅನಾಹುತವಾಗಿದೆ ಅಲ್ಲದೆ, ಶಿವಮೊಗ್ಗ, ಹಾಸನ ಮತ್ತು ಮೈಸೂರಿನ ಡ್ಯಾಂ ಗಳಿಂದ ಹೊರ ಬಂದ ನೀರಿನಿಂದಾಗಿ, ಕಾಫಿ, ಮೆಣಸು ಮತ್ತು ಅಡಕೆ ಬೆಳೆಗಳ ನಷ್ಟ ಉಂಟಾಗಿದೆ.
ಈ ಬಗ್ಗೆ ವರದಿಯನ್ನು ಇನ್ನು ಮೂರು-ನಾಲ್ಕು ದಿನಗಳ ಒಳಗಾಗಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು. ಇದಲ್ಲದೆ, ವರದಿ ನೀಡುವಂತೆ ಕಾಫಿ ಬೋರ್ಡ್‍ಗೆ ಸೂಚಿಸಲಾಗಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ