ಬೆಂಗಳೂರು:
ರಾಜ್ಯದ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಕಾರಣ, ಮುಖ್ಯಮಂತ್ರಿಗಳು, ಸಚಿವರು ಅಲ್ಲಿನ ಜನರ ಪರಿಸ್ಥಿತಿ ಸುಧಾರಣೆಗೆ ಹೆಚ್ಚಿನ ಗಮನ ನೀಡುವ ಈ ಸಮಯದಲ್ಲಿ ಸಮನ್ವಯ ಸಮಿತಿ ಸಭೆ ನಡೆಸುವುದು ಬೇಡವೆಂದು ತೀರ್ಮಾನಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರದ ತಮ್ಮ ಮನೆಯಲ್ಲಿ ಧಿಡೀರ್ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೊಡಗು ಪ್ರಸ್ತುತ ಸ್ಥಿತಿ ಮತ್ತು ಕೊಡಗಿನ ಪುನರ್ ನಿರ್ಮಾಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಮಾದ್ಯಮಗಳಿಗೆ ಮಾಹಿತಿ ನೀಡಿದರು.
ಕೊಡಗಿನಲ್ಲಿ ಭಾರಿ ಅನಾಹುತ ಸಂಭವಿಸಿದ್ದು ಈ ಹಂತದಲ್ಲಿ ಸಭೆ ನಡೆಸುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ಸಮನ್ವಯ ಸಮಿತಿಯ ಸಭೆಯನ್ನು ಮುಂದೂಡಲಾಗಿದ್ದು, ಕೊಡಗಿನ ಪರಿಸ್ಥಿತಿ ಸುಧಾರಿಸಿದ ನಂತರ ಸಭೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆ, ಶಾಧಿ ಭಾಗ್ಯಕ್ಕೆ ಅನುದಾನ ಕಡಿತ, ನಿಗಮ ಮಂಡಳಿಗಳ ನೇಮಕ, ಸಂಪುಟ ವಿಸ್ತರಣೆ, ಸ್ಥಳೀಯ ಸಂಸ್ಥೆ ಚುನಾವಣೆ, ಲೋಕಸಭೆ ಚುನಾವಣೆಗಳ ಬಗ್ಗೆ ಚರ್ಚೆ ನಡೆಯುವ ಭರವಸೆ ಇತ್ತು. ಸಿದ್ದರಾಮಯ್ಯ ಅಧ್ಯಕ್ಷರಾಗಿರುವ ಸಮನ್ವಯ ಸಮಿತಿಯ ಸಭೆ ಈ ತಿಂಗಳು ನಡೆಯಬೇಕಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ