ಹಾನಗಲ್ಲ :
ಅತಿವೃಷ್ಟಿಯಿಂದಾಗಿ ಕೊಡಗು ಜಿಲ್ಲೆ ಜನತೆ ಸಂತ್ರಸ್ತರಾಗಿರುವ ಹಿನ್ನೆಲೆಯಲ್ಲಿ ಹಾನಗಲ್ಲಿನ ಕಂದಾಯ ಇಲಾಖೆ ಸಿಬ್ಬಂದಿಗಳು 70,100ರೂಗಳನ್ನು ತಮ್ಮ ವೇತನದ ಮೂಲಕ ಸಂಗ್ರಹಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಪಿಸಿದ್ದಾರೆ.
ಶನಿವಾರ ಕಂದಾಯ ಇಲಾಖೆಯ ಸಿಬ್ಬಂದಿಗಳು ಈ ಹಣವನ್ನು ಡಿಡಿ ಮೂಲಕ ಜಿಲ್ಲಾಧಿಕಾರಿಗಳಿಗೆ ಕಳಿಸಿದರು. ತಹಸೀಲ್ದಾರ್ ಶಕುಂತಲಾ ಚೌಗಲಾ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಧನ ಸಹಾಯ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ