ಬೆಂಗಳೂರು:
ಮಳೆಯಿಂದಾಗಿ ಸಂತ್ರಸ್ಥ ಕುಟುಂಬಗಳಿಗೆ ನೆರವು ನೀಡುವ ಸಲುವಾಗಿ ತಕ್ಷಣಕ್ಕೆ 100 ಕೋಟಿ.ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಮನೆ ಕಳೆದುಕೊಂಡವರಿಗೆ ತಲಾ 2 ಲಕ್ಷ ರೂ.ಗಳನ್ನು ನೀಡಲಾಗುವುದು. ಈ ರೀತಿಯ ಹಾನಿ ಬಗ್ಗೆ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ 30 ಗಂಜಿ ಕೇಂದ್ರ ತೆರೆದು, 2060 ಮಂದಿಗೆ ಆಶ್ರಯ ನೀಡಲಾಗಿದೆ. ಮೃತರ ಕುಟುಂಬಗಳಿಗೆ 5 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ವೈಧ್ಯರ ಮತ್ತು ಔಷಧಿ ಕೊರತೆಯಾಗದಂತೆ ನಿಗಾ ವಹಿಸಲಾಗಿದೆ. ಕ್ಷಣ-ಕ್ಷಣಕ್ಕೂ ಪರಿಹಾರ ಕಾರ್ಯದ ಬಗ್ಗೆ ಮಾಹಿತಿ ಪಡೆಯಲಾಗುವುದು.
ಸಂತ್ರಸ್ಥರಿಗೆ ಸಹಾಯ ಮಾಡಲು ಸಿ.ಎಂ.ರಿಲೀಫ್ ಫಂಡ್‍ಗೆ ಧನ ಸಹಾಯ ಮಾಡುವಂತೆ ಸಾರ್ವಜನಿರಲ್ಲಿ ಮನವಿ ಮಾಡಿರುವ ಅವರು ಇದನ್ನು ಸಮರ್ಪಕವಾಗಿ ಬಳಸಲಾಗುವುದು ಎಂದರು. ರಾಜ್ಯದಲ್ಲಿ ಆಗಸ್ಟ್ 31 ರಂದು ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಜಿಲ್ಲಾಧಿಕಾರಿಗಳ ವರದಿ ಆದರಿಸಿ, ಚುನಾವಣಾ ಆಯೋಗದಿಂದ ಕೊಡಗು ಜಿಲ್ಲೆಯ ವಿರಾಜಪೇಟೆ, ಮಡಿಕೇರಿ ಮತ್ತು ಸೋಮವಾರಪೇಟೆಯಲ್ಲಿ ಚುನಾವಣೆಗೆ ಮಧ್ಯಂತರ ತಡೆ ನೀಡಲಾಗಿದೆ.