ತುರುವೇಕೆರೆ:
ಕೊರೋನ ರೋಗದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರೈತರಿಗೆ ರಾಜ್ಯ ಸರ್ಕಾರ ಕೊಬ್ಬರಿಗೆ 1000 ಬೆಂಬಲ ಬೆಲೆ ಘೋಷಣೆ ಮಾಡುವ ಮೂಲಕ ಕೊಬ್ಬರಿ ಬೆಲೆಯನ್ನು 11,300ಕ್ಕೆ ನಿಗದಿಪಡಿಸಿ ರೈತರ ನೆರವಿಗೆ ಧಾವಿಸಿರುವುದು ಸಂತಸದ ವಿಚಾರ ಎಂದು ಶಾಸಕ ಮಸಾಲ ಜಯರಾಂ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತುರುವೇಕೆರೆ ಪಟ್ಟಣದ ಎ.ಪಿ.ಎಂ.ಸಿ ಆವರಣದಲ್ಲಿ ಕೊಬ್ಬರಿ ಖರೀದಿ ಕೇಂದ್ರ ಉದ್ಘಾಟನೆಯಲ್ಲಿ ನಾನು ರೈತರಿಗೆ ರಾಜ್ಯ ಸರ್ಕಾರದಿಂದ 1000 ಬೆಂಬಲ ಬೆಲೆ ಕೊಡಿಸಿಕೊಡುವುದಾಗಿ ಭರವಸೆ ನಿಡಿದ್ದೆ, ಅದರಂತೆ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಜಿಲ್ಲೆಯ ಉಸ್ತವಾರಿ ಸಚಿವರಾದ ಮಾಧುಸ್ವಾಮಿ ಹಾಗೂ ನಮ್ಮ ಜಿಲ್ಲೆಯ ಶಾಸಕರುಗಳ ಮನವಿಗೆ ಸ್ಪಂದಿಸಿ ಬೆಂಬಲ ಬೆಲೆ ಘೋಷಿಸಿದ್ದಾರೆ.
ಕೊಬ್ಬರಿ ಬೆಳೆಯುವ ರೈತರಿಗೆ ಅನುಕೂಲ ಮಾಡಿಕೊಟ್ಟ ಮಾನ್ಯ ಮುಖ್ಯಮಂತ್ರಿಗಳಿಗೆ ಜಿಲ್ಲೆಯ ರೈತರ ಪರವಾಗಿ ಹಾಗೂ ತಾಲೂಕಿನ ರೈತರ ಪರವಾಗಿ ಹಾಗೂ ನನ್ನ ವಯಕ್ತಿಕವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.ಪ್ರಸ್ತುತ ಹೇಮಾವತಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಜಲಾಶಯದಿಂದ ಈಗಾಗಲೇ ನೀರನ್ನು ತುಮಕೂರು ನಾಲೆಗೆ ಬಿಡುಗಡೆ ಮಾಡಲಗಿದ್ದು, ಶಿರಾದ ಶಾಸಕರಾಗಿದ್ದ ದಿವಂಗತ ಸತ್ಯನಾರಾಯಣ್ ಅವರಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಮೊದಲ ಹಂತದಲ್ಲೇ ಶಿರಾ ತಾಲೂಕಿಗೆ ನೀರು ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಕೆರೆ ಕಟ್ಟೆಗಳನ್ನು ತುಂಬಿಸಲಾಗುವುದು ಈಗಾಗಲೇ ಉಪನಾಲೆಗಳಲ್ಲಿ ಜಂಗಲ್‍ಕ್ಲೀನ್ ಕಾಮಗಾರಿ ಭರದಿಂದ ಸಾಗುತ್ತಿದ್ದು, ನೀರು ಸರಾಗವಾಗಿ ಕೆರೆ-ಕಟ್ಟೆಗಳಿಗೆ ಹರಿಯಲು ಅನುಕೂಲ ವಾಗುವಂತೆ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ.
ಈ ಭಾರಿ ತಾಲೂಕಿಗೆ ನಿಗದಿಪಡಿಸಿದಷ್ಟು ನೀರನ್ನು ಹರಿಸುವ ನಿಟ್ಟಿನಲ್ಲಿ ಹಾಸನ ಜಿಲ್ಲಾ ಸಚಿವರುಗಳಾದ ಗೋಪಾಲಯ್ಯನವರು ಹಾಗೂ ತುಮಕೂರು ಜಿಲ್ಲಾ ಸಚಿವರಾದ ಮಾಧುಸ್ವಾಮಿಯವರ ಬಳಿ ಚರ್ಚಿಸಲಾಗುವುದು, ರೈತರು ನಿಸಂದೇಹವಾಗಿ ತಮ್ಮ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡು ಉತ್ತಮ ಇಳುವರಿಯನ್ನು ಪಡೆಯಲಿ ಎಂದು ಆಶಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ