ಕೊರೋನಾದಿಂದ ‘ಕಿರಾತಕ’ ನಿರ್ದೇಶಕ ಪ್ರದೀಪ್ ರಾಜ್ ವಿಧಿವಶ

ಬೆಂಗಳೂರು:

  ಸ್ಯಾಂಡಲ್ವುಡ್ ನಿರ್ದೇಶಕ ಪ್ರದೀಪ್ ರಾಜ್(46) ವಿಧಿವಶರಾಗಿದ್ದಾರೆ.

ಕೊರೊನಾ ಸೋಂಕಿನಿಂದ ಪ್ರದೀಪ್ ರಾಜ್ ನಿಧನರಾಗಿದ್ದಾರೆ.

‘ಕಿರಾತಕ’, ‘ಅಂಜದಗಂಡು’, ‘ಬೆಂಗಳೂರು 23’ ಸೇರಿದಂತೆ ಹಲವು ಸಿನಿಮಾಗಳನ್ನು ಪ್ರದೀಪ್ ರಾಜ್ ನಿರ್ದೇಶಿಸಿದ್ದರು. ಇಂದು ಬೆಳಗಿನಜಾವ 3 ಗಂಟೆ ಸುಮಾರಿಗೆ ಪ್ರದೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ. ಇಂದು ಅಂತ್ಯಕ್ರಿಯೆ ನೆರವೇರಲಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link