ಕುಣಿಗಲ್
ಯಡಿಯೂರು ಹೋಬಳಿ ಅಣೆಗೊಲ್ಲರಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕೋಲಾಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಶಿಕ್ಷಕಿ ಎಂ.ಸಿ ಲೀಲಾವತಿ ತಿಳಿಸಿರುತ್ತಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬುಧವಾರ ಪಟ್ಟಣದಲ್ಲಿ ಜರಗಿದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಕೋಲಾಟ ಸ್ಪರ್ಧೆಯಲ್ಲಿ ಮಿಂಚಿನ ಪೈಪೋಟಿ ನೀಡಿ ಪ್ರಥಮಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಹಾಗೂ ಮಕ್ಕಳಲ್ಲಿರುವ ಉತ್ತಮ ಪ್ರತಭೆಯನ್ನು ಗುರುತಿಸಿ ಪ್ರಥಮಸ್ಥಾನ ನೀಡಿದ ತೀರ್ಪುಗಾರರಿಗೆ ಪೋಷಕರು ಹಾಗೂ ಶಾಲೆಯವರು ಅಭಿನಂದನೆ ಸಲ್ಲಿಸುತ್ತೇವೆ ಎಂದ ಅವರು, ಭಕ್ತಿ ಗೀತೆಯಲ್ಲಿ ದ್ವಿತೀಯ, ದೇಶ ಭಕ್ತಿ ಗೀತೆಯಲ್ಲಿ ತೃತೀಯ ಸ್ಥಾನ ಪಡೆದಿರುವ ಮಕ್ಕಳಿಗೂ ಅಭಿನಂದನೆ ಸಲ್ಲಿಸಿ ಹರ್ಷವ್ಯಕ್ತಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
