ಕೋಲಾರ:

ಕೋಲಾರ ಜಿಲ್ಲೆ, ಮಾಲೂರು ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಕಾರ್ಖಾನೆ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ನಿಗಮದ ಕೈಗಾರಿಕಾ ವಲಯದಲ್ಲಿರುವ ಸೌತ್ ಫೀಲ್ಡ್ ಪೈಂಟ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಯಾವುದೇ ಜೀವ ಹಾನಿ ಆದ ವರದಿಗಳು ಬಂದಿಲ್ಲ ಆದರೆ ಕೋಟ್ಯಾಂತರ ರೂಪಾಯಿ ಬೆಲೆಯ ದಾಸ್ತಾನು ಹಾಗೂ ಉಪಕರಣಗಳು ಬೆಂಕಿಗೆ ಆಹುತಿಯಾಗಿದೆ.ಕೋಲಾರ ಮತ್ತು ಮಾಲೂರಿನಿಂದ ಅಗ್ನಿಶಾಮಕ ದಳದ ವಾಹನಗಳು ಧಾವಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನದಲ್ಲಿ ತೊಡಗಿವೆ. ಬೆಂಕಿಯಿಂದಾಗಿ ಕೈಗಾರಿಕಾ ವಲಯದಲ್ಲಿ ಆಕಾಶದೆತ್ತರಕ್ಕೆ ದಟ್ಟವಾದ ಹೊಗೆ ಆವರಿಸಿಕೊಂಡಿದೆ.
