ದಾವಣಗೆರೆ:
ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿಗೆ ನಿಗದಿ ಮಾಡಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ದವಸ-ಧಾನ್ಯ ಖರೀದಿಗಾಗಿ ಖರೀದಿ ಕೇಂದ್ರ ತೆರೆಯಲು ಅಧಿಕಾರಿಗಳು ಸಿದ್ಧತೆ ನಡೆಸಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ 2018-19ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವ ಕನಿಷ್ಟ ಬೆಂಬಲ ಬೆಲೆ ಯೋಜನೆ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳೆಗಳ ಇಳುವರಿ ಹೆಚ್ಚಿದ್ದು, ದವಸ-ಧಾನ್ಯ ಸಂಗ್ರಹಿಸಲು ಉಗ್ರಾಣ, ಎಫ್ಎಕ್ಯೂ ಬಗ್ಗೆ ಪ್ರಚುರಪಡಿಸುವುದು, ಖರೀದಿ ಏಜೆನಿ
