ಬೆಂಗಳೂರು:
ಅವರು ನಮಗೆ ತಂದೆ ಸಮಾನರಾದ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ನಾಯಕರು, ಅವರು ಹೇಳಿದಂತೆ ನಾವು ಕೇಳುತ್ತೇವೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದೇವೆ. ಅವರು ತೆಗೆದುಕೊಳ್ಳುವ ತೀರ್ಮಾನವನ್ನು ಪಾಲಿಸುತ್ತೇವೆ ಎಂದರು.
ನಮ್ಮಲ್ಲಿ ಕೆಲವು ಗೊಂದಲಗಳು ಇರುವುದು ಸಹಜ. ಆದರೆ, ರಾಜ್ಯ ಕಾಂಗ್ರೆಸ್‌ನಲ್ಲಿ ಸಮಸ್ಯೆಗಳಿಲ್ಲ. ಇದ್ದರೆ ಅದನ್ನು ಪಕ್ಷದ ನಾಯಕರು ಸರಿಪಡಿಸುತ್ತಾರೆ. ಸರ್ಕಾರ ಪತನ ಮಾಡುವ ಸುದ್ದಿಗಳು ಸುಳ್ಳು ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ