ಬೆಂಗಳೂರು
ದಸರಾ ಮಹೋತ್ಸವ ಅಂಗವಾಗಿ ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಖಾಸಗಿ ದರ್ಬಾರ್ ಆರಂಭವಾಗಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಂಪ್ರದಾಯಿಕವಾಗಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ರತ್ನ ಖಚಿತ ಸಿಂಹಾಸನ ಆರೂಢರಾಗಿ ಖಾಸಗಿ ದರ್ಬಾರ್ ಆರಂಭಿಸಿದರು.
ಮೊದಲು ಕಳಶ ಪೂಜೆ ನೆರವೇರಿಸಿದ ಯದುವೀರ್ ನಂತರ ಕಂಕಣಧಾರಣೆ ಮಾಡಿ ಸಿಂಹಾಸನ ಆರೂಢರಾದರು. ದಸರಾಗೆ ಚಾಲನೆ ನೀಡಿದ ಇನ್ಪೋಸಿಸ್ ಪ್ರತಿಷ್ಟಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಖಾಸಗಿ ದರ್ಬಾರ್ ವೀಕ್ಷಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ