ಗುತ್ತಿಗೆದಾರ ಸಂತೋಷ್ ಪಾಟೀಲ್ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭೇಟಿ

ಬೆಳಗಾವಿ:

ಮಾಜಿ ಸಚಿವ ಈಶ್ವರಪ್ಪ ಅವರ 40 % ಕಮಿಷನ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ನಿವಾಸಕ್ಕೆ ಮಂಗಳವಾರ ಭೇಟಿ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಸಂತೋಷ್ ಪಾಟೀಲ್ ಅವರ ಪತ್ನಿಗೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಿಸಿದರು.

ಚಾಮರಾಜನಗರದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ

ಸಂತೋಷ್ ಪಾಟೀಲ್ ಅವರು ಸಾವನ್ನಪ್ಪಿದಾಗ ಅವರ ನಿವಾಸಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಿಯೋಗದಲ್ಲಿದ್ದ ಡಿ. ಕೆ. ಶಿವಕುಮಾರ್ ಅವರು 11 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ಬೆಳಗಾವಿಗೆ ತೆರಳಿ ಪರಿಹಾರ ನೀಡಿದ್ದಾರೆ.

ಏ.22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗೆ ಕ್ಷಣಗಣನೆ: 6.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ಇದಲ್ಲದೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ವೈಯಕ್ತಿಕವಾಗಿ 5 ಲಕ್ಷ ರು. ಪರಿಹಾರ ಚೆಕ್ ನೀಡಿದರು.ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಹಂತೇಶ್ ಎಸ್ ಕೌಜಲಗಿ,ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನವಲಗಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap