ಗುಬ್ಬಿ : ಗ್ರಾಪಂ ಚುನಾವಣೆ : ಮತದಾನಕ್ಕೆ ಸರ್ವ ಸಿದ್ಧತೆ

 ಗುಬ್ಬಿ : 

      ತಾಲ್ಲೂಕಿನ 34 ಗ್ರಾಮ ಪಂಚಾಯ್ತಿಗಳ ಫೈಕಿ ಮಂಚಲದೊರೆ ಮತ್ತು ಅಂಕಸಂದ್ರ ಗ್ರಾಮ ಪಂಚಾಯಿತಿ ಹೊರತುಪಡಿಸಿದಂತೆ ಉಳಿದ 32 ಗ್ರಾಮ ಪಂಚಾಯ್ತಿಗಳಿಗೆ ನಡೆಯಲಿರುವ ಚುನಾವಣೆಗೆ ತಾಲ್ಲೂಕು ಆಡಳಿತ ಎಲ್ಲಾ ರೀತಿಯ ಸಿದ್ದತೆಯನ್ನು ವ್ಯವಸ್ಥಿತವಾಗಿ ಮಾಡಿಕೊಂಡಿದ್ದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.

      ಡಿ 22 ರಂದು ಸಂಜೆ ಮತಪೆಟ್ಟಿಗೆಗಳನ್ನು ಸ್ವೀಕರಿಸಲು ಕಾಲೇಜಿನಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ತಹಸೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ್ ತಿಳಿಸಿದರು.

      ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಿಯೋಜಿತ ಚುನಾವಣಾ ಸಿಬ್ಬಂದಿಗಳು ಬೆಳಿಗ್ಗೆಯಿಂದಲೇ ಹಾಜರಾಗಿ ತಮ್ಮ ಮತಗಟ್ಟೆ ಸ್ಥಳಕ್ಕೆ ತೆರಳಲು ಮತಪೆಟ್ಟಿಗೆಗಳು ಸೇರಿದಂತೆ ಮತದಾನಕ್ಕೆ ಅಗತ್ಯವಿರುವ ಎಲ್ಲಾ ಸಾಮಗ್ರಿಗಳೊಂದಿಗೆ ಸಿದ್ದವಾಗಿದ್ದರು ನಂತರ ಮತಗಟ್ಟೆಗಳಿಗೆ ಚುನಾವಣಾ ಸಾಮಗ್ರಿಗಳು ಮತ್ತು ಮತಗಟ್ಟೆ ಅಧಿಕಾರಿಗಳನ್ನು ಕರೆದೊಯ್ಯಲು 32 ಬಸ್ ಮತ್ತು 10 ಮಿನಿಬಸ್‍ಗಳ ವ್ಯವಸ್ಥೆ ಮಾಡಲಾಗಿತ್ತು.

      32 ಗ್ರಾಮ ಪಂಚಾಯ್ತಿ ಚುನಾವಣೆಗೆ 300 ಮತಗಟ್ಟೆಗಳ ವ್ಯವಸ್ಥೆ ಮಾಡಲಾಗಿದ್ದು ಚುನಾವಣಾ ಕರ್ತವ್ಯಕ್ಕಾಗಿ ಒಟ್ಟು 1200 ಮಂದಿ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ ಅವರು ಮತಗಟ್ಟೆಗಳಿಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನೂ ಬಂದೋಬಸ್ತ್‍ಗಾಗಿ ನಿಯೋಜಿಸಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ವಿಶೇಷ ಭದ್ರತೆ ಒದಗಿಸಲು ಹೆಚ್ಚಿನ ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಜೊತೆಗೆ ವಿಡಿಯೋ ಚಿತ್ರೀಕರಣ ವ್ಯವಸ್ಥೆಯನ್ನು ಮಾಡಲಾಗುವುದೆಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link