ಬೆಂಗಳೂರು:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೈ ಕಾಲುಗಳು ಹಾಗೂ ರುಂಡವಿಲ್ಲದ 52 ವರ್ಷದ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ದೃಶ್ಯಗಳನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ನಗರದ ಹೊರವಲಯದ ಬನ್ನೇರುಘಟ್ಟದಲ್ಲಿ ಈ ಘಟನೆ ನಡೆದಿದ್ದು, ಹಂತಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಕೊಲೆಯ ಹಿಂದಿನ ಉದ್ದೇಶವನ್ನು ತಿಳಿಯಲು ತನಿಖೆ ನಡೆಸುತ್ತಿದ್ದಾರೆ.
ಮೃತರನ್ನು ಬನ್ನೇರುಘಟ್ಟದ ಜನತಾ ಕಾಲೋನಿ ನಿವಾಸಿ ಗೀತಾ ಎಂದು ಗುರುತಿಸಲಾಗಿದ್ದು, ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆರು ವರ್ಷಗಳ ಹಿಂದೆ ಪತಿ ತೀರಿಕೊಂಡ ನಂತರ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾದ ನಂತರ ಅವರು ಒಂಟಿಯಾಗಿ ವಾಸಿಸುತ್ತಿದ್ದರು.
ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. 3-4 ದಿನಗಳ ಹಿಂದೆ ಮನೆ ಖಾಲಿ ಮಾಡಿದ ಪಕ್ಕದ ಮನೆಯಲ್ಲಿ ವಾಸವಿದ್ದ ಮೂವರು ಯುವಕರ ಬಗ್ಗೆ ಶಂಕೆ ವ್ಯಕ್ತವಾಗಿದೆ. “ಪ್ರಾಥಮಿಕ ತನಿಖೆಯಲ್ಲಿ ಮೇ 28 ಅಥವಾ 29 ರಂದು ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಾವು ಎಲ್ಲಾ ಕೋನಗಳಿಂದ ಪ್ರಕರಣವನ್ನು ತನಿಖೆ ಮಾಡುತ್ತಿದ್ದೇವೆ ಮತ್ತು ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರದ ಮೂವರು ಯುವಕರ ಪಾತ್ರದ ಬಗ್ಗೆ ಬಲವಾಗಿ ಶಂಕಿಸಲಾಗಿದೆ” ಎಂದು ಅವರು ಹೇಳಿದ್ದಾರೆ.ಬನ್ನೇರುಘಟ್ಟ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ