ಚನ್ನಗಿರಿ ತಾಲೂಕಿನಲ್ಲಿ ಸಿದ್ದೇಶ್ವರ್ ಮತ ಯಾಚನೆ

ದಾವಣಗೆರೆ:

       ಚನ್ನಗಿರಿ ತಾಲೂಕಿನ ವಿವಿಧ ಗ್ರಾಮಗಳಿಗೆ ಮಂಗಳವಾರ ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ ಭೇಟಿ ನೀಡಿ ಮತಯಾಚನೆ ನಡೆಸಿದರು.

         ಚನ್ನಗಿರಿ ತಾಲೂಕಿನ ಹಿರೇಗಂಗೂರು, ಚಿಕ್ಕಗಂಗೂರು, ಕೊರಟೀಕೆರೆ, ಶೆಟ್ಟಿಹಳ್ಳಿ, ಮಾದಾಪುರ, ಹೆಬ್ಬಳಗೆರೆ, ಬೆಂಕಿಕೆರೆ, ಹೊದಿಗೆರೆ, ಯರಗಟ್ಟಿಹಳ್ಳಿ, ನೀತಿಗೆರೆ, ನುಗ್ಗಿಹಳ್ಳಿ, ದೇವರಹಳ್ಳಿ, ಹಿರೇಉಡ, ಕಗತೂರು, ಹಟ್ಟಿ, ಬುಳಸಾಗರ, ಮಂಟರಘಟ್ಟ, ಇಟ್ಟಿಗೆ, ಅರಿಶಿನಘಟ್ಟ, ನಲ್ಲೂರು ಸೇರಿದಂತೆ ವಿವಿಧ ಗ್ರಾಮಗಳಿಗೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹಾಗೂ ಅಪಾರ ಸಂಖ್ಯೆಯ ಪಕ್ಷದ ಕಾರ್ಯಕರ್ತರೊಂದಿಗೆ ಭೇಟಿ ನೀಡಿದ ಸಂಸದ ಜಿ.ಎಂ.ಸಿದ್ದೇಶ್ವರ ಕೇಂದ್ರ ಸರ್ಕಾರದ ಸಾಧನೆಗಳನ್ನು ಹಾಗೂ ರಾಜ್ಯ ಸರ್ಕಾರದ ವೈಫಲ್ಯವನ್ನು ತಿಳಿಸಿ ಮತಯಾಚಿಸಿದರು.

        ಚುನಾವಣಾ ಪ್ರಚಾರ ವೇಳೆ ಮಾತನಾಡಿದ ಜಿ.ಎಂ.ಸಿದ್ದೇಶ್ವರ, ದೇಶದ ರಕ್ಷಣೆಗೆ ನರೇಂದ್ರ ಮೋದಿ ಅವರನ್ನ ಮತ್ತೊಮ್ಮೆ ಆಯ್ಕೆ ಮಾಡುವ ಅವಶ್ಯಕತೆ ಇದೆ. ಪುಲ್ವಾಮಾದಲ್ಲಿ ಉಗ್ರರ ದಾಳಿ ನಡೆದ ಸಂದರ್ಭದಲ್ಲಿ ಪ್ರಧಾನಿಯವರು ಕೈ ಕಟ್ಟಿ ಕೂರಲಿಲ್ಲ. 11 ದಿನದಲ್ಲೇ ತಕ್ಕ ಉತ್ತರ ನೀಡಿದ್ದಾರೆ. ನಮ್ಮ ದೇಶ ರಕ್ಷಣೆ ಮಾಡುವ ಸೈನಿಕರಿಗೆ ಸ್ವತಂತ್ರ ನೀಡಿ ಉಗ್ರರ ದಮನಕ್ಕೆ ದಿಟ್ಟತನ ಉತ್ತರ ನೀಡಿದ್ದಾರೆ. ನಮ್ಮ ದೇಶಕ್ಕೆ ನೆರೆಯ ದೇಶಗಳಾದ ಪಾಕಿಸ್ತಾನ, ಚೀನಾ ಮತ್ತು ಬಾಂಗ್ಲಾದೇಶ ಉಪಟಳ ತಡೆಯಲು ನರೇಂದ್ರ ಮೋದಿಯವರಂತಹ ಧೀಮಂತ ನಾಯಕ ಬೇಕು. ಇದಕ್ಕಾಗಿ ಬಿಜೆಪಿಯನ್ನು ಮತ್ತೊಮ್ಮೆ ಬೆಂಬಲಿಸಬೇಕೆಂದು ಮನವಿ ಮಾಡಿದರು.

          ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮಾತನಾಡಿ, ಸಾಮಾಜಿಕವಾಗಿ, ಆರ್ಥಿಕವಾಗಿ ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕಿದೆ. ಕ್ಷೇತ್ರದ ಜನರು ಈ ಬಾರಿಯೂ ಬಿಜೆಪಿಗೆ ಬೆಂಬಲ ನೀಡಬೇಕಿದೆ. ಜಿ.ಎಂ.ಸಿದ್ದೇಶ್ವರ್‍ರನ್ನ ಗೆಲ್ಲಿಸಲು ನಾವು ಶ್ರಮಿಸಬೇಕಿದೆ. ಬಿಜೆಪಿಗೆ ಮತ ಹಾಕುವ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap