ಚಿಕಿತ್ಸೆ ನೀಡಲು ನಿರಾಕರಿಸಿದರೆ ವೈದ್ಯರ ವಿರುದ್ದ ಶಿಶ್ತು ಕ್ರಮ : ಆರೋಗ್ಯ ಸಚಿವ

ಬೆಂಗಳೂರು

      ‘ನಿಮ್ಮ ಆರೋಗ್ಯ ನಮ್ಮ ಬದ್ಧತೆ’ ಎಂಬ ಧ್ಯೇಯ ವಾಕ್ಯದಂತೆ ಎಲ್ಲರಿಗೂ ಚಿಕಿತ್ಸೆ ಒದಗಿಸಲಾಗುತ್ತಿದ್ದು, ಆದಾಗ್ಯೂ ಚಿಕಿತ್ಸೆ ನೀಡುವುದನ್ನು ನಿರಾಕರಿಸಿದಲ್ಲಿ, ಸಂಬAಧಪಟ್ಟ ಆಸ್ಪತ್ರೆಯ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ/ಇತರ, ಸಿಬ್ಬಂದಿಗಳನ್ನು ನೇರ ಜವಾಬ್ದಾರರನ್ನಾಗಿಸಿ, ಅದು ಅವರು ಎಸಗಿರುವ ದುರ್ನಡತೆ ಎಂದು ಪರಿಗಣಿಸಿ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದರು.

    ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊರ ರೋಗಿಗಳನ್ನ ಪರೀಕ್ಷಿಸುವ ವೈದ್ಯಕೀಯ ಮೌಲ್ಯಮಾಪನದ ಆಧಾರದ ಮೇಲೆ ತುರ್ತು ಪರಿಸ್ಥಿತಿ ಅಥವಾ ಆವಶ್ಯಕತೆಯ ಅನುಗುಣವಾಗಿ ಒಳ ರೋಗಿಗಳಾಗಿ ದಾಖಲಾತಿಯು ನಿರ್ಧಾರವಾಗುತ್ತದೆ.

    ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತುರ್ತು ಆರೋಗ್ಯ ಸೇವೆ ಪಡೆಯುವ ಸಲುವಾಗಿ ದಾಖಲಾಗುವ ರೋಗಿಗಳ ಚಿಕಿತ್ಸೆ ಸಂದರ್ಭದಲ್ಲಿ ದಾಖಲೆಗಳನ್ನು ಒದಗಿಸಿಲ್ಲವೆಂಬ ಕಾರಣಗಳಿಗಾ ಚಿಕಿತ್ಸೆಯನ್ನು ನೀಡಲು ನಿರಾಕರಿಸುವುದನ್ನು ತಡೆಗಟ್ಟುವ  ಮಾರ್ಗಸೂಚಿಗಳನ್ನು ನಿಗದಿಪಡಿ ಸಲಾಗಿದೆ. ಇದರಲ್ಲಿ ರಾಜ್ಯದ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತುರ್ತು ಆರೋಗ್ಯ ಸೇವೆ ನೀಡುವ ಸಮಯದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ/ಇತರೆ ಸಿಬ್ಬಂದಿಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಹಾಗೂ ಬಿ.ಪಿ.ಎಲ್. ಕಾರ್ಡ್ದಾರರಿಗೆ ಇಲಾಖೆಯ ವಿವಿಧ ಯೋಜನೆಯಡಿಯಲ್ಲಿ ಉಚಿತ ಚಿಕಿತ್ಸೆ ಮತ್ತು ಔಷಧಿಗಳನ್ನು ಒದಗಿಸಲಾಗುತ್ತಿದೆ.

    ಆರೋಗ್ಯ ಇಲಾಖೆಯಲ್ಲಿ ಆಯುಷ್ಮಾನ್ ಭಾರತ ಡಿಜಿಟಲ್ ಅಭಿಯಾನದಡಿಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಎಂಬ ನೂತನ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗಿದೆ. ಇದರಿಂದಾಗಿ ವೈದ್ಯರ ಸಮಾಲೋಚನೆಗಾಗಿ ರೋಗಿಗಳು ಕಾಯುವ ಸಮಯವು ಗಣನೀಯವಾಗಿ ತಗಿದ್ದು, ಹೊರ ರೋಗಿಗಳು ಶೀಘ್ರವಾಗಿ ವೈದ್ಯರ ಸಲಹೆ ಪಡೆಯಲು ಸಹಕಾರಿಯಾಗಿದೆ. ಆಸ್ಪತ್ರೆಗಳಲ್ಲಿ ಬಿ.ಪಿ.ಎಲ್ ಕಾರ್ಡು ಹೊಂದಿರುವ ರೋಗಿಗಳಿಗೆ ೫ ಲಕ್ಷವರೆಗಿನ ಚಿಕಿತ್ಸೆಯು ಸಂಪೂರ್ಣವಾಗಿ ಉಚಿತವಾಗಿದೆ ಹಾಗೂ ಎ.ಪಿ.ಎಲ್ ಕಾರ್ಡು ಹೊಂದಿರುವವರಿಗೆ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ ರೂ.೧.೫೦ ಲಕ್ಷಗಳ ವರೆಗೆ ಸರ್ಕಾರವೇ ಭರಿಸುತ್ತದೆ. ಡಯಾಲಿಸಿಸ್, ಸೇವೆಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link