ಚಿತ್ರದುರ್ಗ:
ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊಲ್ಲಹಳ್ಳಿ ಗೇಟ್ ಸಮೀಪದ ಬೆಳಗಾವಿ-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಲಿಂಗಸುಗೂರು ತಾಲ್ಲೂಕಿನ ಗೌಡೂರು ಗ್ರಾಮದ ಸಾಯಿಬಣ್ಣ (35) ಮತ್ತು ವೆಂಕಟೇಶ್ (30) ಎಂದು ಗುರುತಿಸಲಾಗಿದೆ .
ಆನಂದ್ (33) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಗುರುವಾರ ಬೆಳಿಗ್ಗೆ ಕಾರು ಚಳ್ಳಕೆರೆ ಕಡೆಯಿಂದ ಹಿರಿಯೂರಿಗೆ ಬರುತ್ತಿತ್ತು. ಸಂಜನಾ ಟ್ರಾವೆಲ್ಸ್ ಬಸ್ ಹಿರಿಯೂರು ಕಡೆಯಿಂದ ಚಳ್ಳಕೆರೆಗೆ ಹೋಗುತ್ತಿದ್ದಾಗ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಐಮಂಗಲ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
