ತುರುವೇಕೆರೆ:
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಅರೆಮಲ್ಲೇನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ 45 ವರ್ಷದ ಸುಜಾತ ಎಂಬ ಮಹಿಳೆ ದುರ್ಮರಣ ಹೊಂದಿದ ಘಟನೆಗೆ ಸಂಬಂಧಿಸಿ, ತುರುವೇಕೆರೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾಂತ್ವನ ಹೇಳಿದರು. ಈ ವೇಳೆ ಅರಣ್ಯ ಇಲಾಖೆಯಿಂದ ಪರಿಹಾರ ಧನದ ಚೆಕ್ ವಿತರಣೆ ಮಾಡಿದರು.
ಅನಂತರ ತಾಲೂಕು ಕಚೇರಿಯಲ್ಲಿ ಶಾಸಕರಾದ ಎಂ.ಟಿ. ಕೃಷ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ಚಿರತೆಯನ್ನು ಶೀಘ್ರವಾಗಿ ಹಿಡಿಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.








