ಚೌಗಮ್ ನಲ್ಲಿ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ
ಕುಲ್ಗಾಮ್ : 
ಕುಲ್ಗಾಮ್ ಜಿಲ್ಲೆಯ ಕ್ವಾಜಿಗುಂಡ್ ಪಟ್ಟಣದ ಚೌಗಮ್ ಪ್ರದೇಶದಲ್ಲಿ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.ಈ ಪ್ರದೇಶದಲ್ಲಿ ಗುಂಡಿನ ಚಕಮಕಿ ಸದ್ಯ ನಿಂತಿದ್ದು ಶೋಧ ಕಾರ್ಯ ಮುಂದುವರಿದಿದೆ. ಉಗ್ರಗಾಮಿಗಳ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಯೋಧರು ನಿನ್ನೆ ರಾತ್ರಿಯಿಂದ ಶೋಧ ಕಾರ್ಯ ಆರಂಭಿಸಿದರು.ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ಪಡೆದ ಯೋಧರು ಗುಂಡಿನ ದಾಳಿ ಆರಂಭಿಸಿದರು. ಮೃತ ಮೂವರು ಉಗ್ರರ ಶವಗಳನ್ನು ಇನ್ನೂ ಹೊರತೆಗೆದಿಲ್ಲ . ಬರಮುಲ್ಲಾ-ಕ್ವಾಜಿಗುಂಡ್ ನಡುವೆ ರೈಲು ಸಂಚಾರ ಸೇವೆಯನ್ನು ರದ್ದುಗೊಳಿಸಲಾಗಿದೆ. ಕುಲ್ಗಾಮ್ ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಕೂಡ ರದ್ದುಗೊಳಿಸಲಾಗಿದೆ.
