ಚಿತ್ರದುರ್ಗ
ಸರ್ಕಾರದ ನಿರ್ದೇಶನದ ಪ್ರಕಾರವಾಗಿ ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆಗಾಗಿ ಜಿಲ್ಲಾಡಳಿತ ನಿಮ್ಮ ಮನೆ ಬಾಗಿಲಿಗೆ ಬಂದಿದೆ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನ ಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಸಿಲಾಗಿದ್ದ ಜನಸ್ಪಂದಾನ ಹಾಗೂ ಗ್ರಾಮ ವಾಸ್ತವ್ಯ ಸಭೆಯಲ್ಲಿ ಮಾತನಾಡಿದ ಅವರು ಸರ್ಕಾರದ ಸೌಲಭ್ಯಗಳನ್ನು ಹೇಗೆ ಪಡೆದುಕೊಳ್ಳುಬೇಕೆಂದು ತಿಳಿಯದೇ ಇರುವವರು ಈ ಜನಸ್ಪಂದನಾ ಸಭೆಯಲ್ಲಿ ಸರ್ಕಾರದ ಸೌಲಭ್ಯಗಳ ಮಾಹಿತಿಗಳನ್ನು ತಿಳಿದುಕೊಂಡು ಅರ್ಜಿಗಳನ್ನು ಸಲ್ಲಿಸುವ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ಗ್ರಾಮ ಪಂಚಾಯಿತಿಯಲ್ಲಿ ನಡೆಯುವ ಗ್ರಾಮ ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ ಸರ್ಕಾರದ ನೂತನ ಯೋಜನೆಗಳ ಬಗ್ಗೆ ತಿಳಿದುಕೊಂಡು, ಗ್ರಾಮ ಮಟ್ಟದಲ್ಲಿ ಅರ್ಜಿಗಳನ್ನು ಮೊದಲು ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ ಸರ್ಕಾರದಿಂದ ಬರುವ ಅನುದಾನದಿಂದ 70 ರಣ್ಟು ಶೇ ಕೆಲಸವಾದರೆ ಅದರಿಂದ ಎಷ್ಟೋ ಜನಕ್ಕೇ ಅನುಕೂಲವಾಗಲಿದೆ. ನಿತ್ಯಗ್ರಾಮ ಪಂಚಾಯಿಗಳಲ್ಲಿ ಗ್ರಾಮಲೆಕ್ಕಾಧಿಕಾರಿಗಳ, ಪಿಡಿಓಗಳು ಕಡ್ಡಾಯವಾಗಿ ಕಛೇರಿಗಳಲ್ಲಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ. ಸರಕಾರ ನೀಡುವ ವೃದ್ಧ್ಯಪ್ಯಾ ಪಿಂಚಣಿ ದಳ್ಳಾಳಿಗಳ ಪಾಲಾಗದೆ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಎಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. ಸರಕಾರದ ಯೋಜನೆಗಳನ್ನು ಫಲಾಭವಿಗಳು ಪದೇ ಪದೇ ಪಡೆಯದೆ ಬೇರೆ ಫಲಾನುಭವಿಗಳಿಗೆ ಅವಕಾಶ ನೀಡುವಂತೆ ಮಾಡಿಕೊಂಡಬೇಕೆಂದು ಜನಸಾಮಾನ್ಯರಲ್ಲಿ ಮನವಿ ಮಾಡಿಕೊಂಡರು. ಮರಳುಗಾರಿಕೆ ಹಾಗೂ ಮನೆಗಳಲ್ಲಿ ಮಾರಾಟ ಮಾಡುತ್ತಿದ್ದನ್ನು ಹಾಗೂ ಜೂಜುಗಾರಿಕೆಯನ್ನು ಕೂಡಲೇ ಪೆÇೀಲಿಸ್ ಇಲಾಖೆ ಹಾಗೂ ಅಬಕಾರಿ ಇಲಾಖೆಗಳು ಗಮನ ಹರಿಸಿ ತಟ್ಟೆಗಟ್ಟುವಂತೆ ಒತ್ತಾಯಿಸಿದರು.
ನಂತರ ಜಿಲ್ಲಾಧಿಕಾರಿ ವಿವಿ ಜೋತ್ಸ್ನಾ ಮಾತನಾಡಿ ಸಾರ್ವಜನಿಕರ ಪ್ರತಿಯೊಂದು ಸಮಸ್ಯೆಗಳಿಗೆ ಯಾವುದೋ ಒಂದು ರೀತಿಯಲ್ಲಿ ಪರಿಹರ ಇದ್ದೇ ಇರುತ್ತದೆ. ಸರಕಾರ ಪ್ರಜೆಗಳ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಕಂಡು ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಜಿಲ್ಲೆಯ 120 ಹಳ್ಳಿಗಳಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮವಾಸ್ತವ್ಯ ಮಾಡುವ ಮೂಲಕ ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳನ್ನು ನಿವಾರಣೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಶಾಲೆ ಬಿಟ್ಟ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕರೆತರುವಂತ ಪ್ರಯತ್ನವನ್ನು ಮಾಡಬೇಕಾಗಿದೆ. ಕುಟುಂಬದ ಸಮಸ್ಯೆಗಳಿಗೆ ಮಕ್ಕಳನ್ನು ಬಲಿಕೊಡದೆ ಶಿಕ್ಷಣದ ಕಡೆ ಗಮನಹರಿಸುವಂತೆ ಮಕ್ಕಳಿಗೆ ಪೆÇೀಷಕರು ತಿಳಿಸಬೇಕು. ಶಿಕ್ಷಣವಿಲ್ಲದೆ ಬಡತನ ನಿವಾರಣೆ ಮಾಡಲು ಅಸಾಧ್ಯ ಹಾಗಾಗಿ ತಮ್ಮ ಅಕ್ಕಪಕ್ಕದ ಮನೆಗಳಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ನಮ್ಮ ಅಧಿಕಾರಿಗಳಿಗೆ ತಿಳಿಸುವಂತೆ ಸಾರ್ವಜನಿಕರಲ್ಲಿ ಮನವಿಮಾಡಿದರು.
ಇನ್ನೂ ಈ ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಪಿಎನ್ ರವೀಂದ್ರ, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಧಿಕಾರಿ ವಿಜಯ್ ಕುಮಾರ್, ಹಿರೊಯೂರು ತಾಲೂಕು ಪಂಚಾಯತಿ ಅಧ್ಯಕ್ಷ ಚಂದ್ರಣ್ಣ, ತಾಲೂಕು ಪಂಚಾಯತಿ ಸದಸ್ಯ ನಾಗೇಂದ್ರ ಸೇರಿದ್ದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.







