ಜನಸ್ಪಂದನ : 3ಜನರ ಚಿಕಿತ್ಸೆಗೆ 10 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು

    ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸುತ್ತಿದ್ದಾರೆ. ಈ ವೇಳೆ ಸ್ಥಳದಲ್ಲೇ ಮೂವರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ ಪರಿಹಾರವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

    ಈ ಕುರಿತು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದು, ರಾಮನಗರ ಜಿಲ್ಲೆಯ ವಿಜಯಕುಮಾರ್‌ ಬಿನ್‌ ನರಸಿಂಹಮೂರ್ತಿ ಎಂಬುವವರಿಗೆ ಕಿಡ್ನಿ ಕಸಿ ಚಿಕಿತ್ಸೆಗಾಗಿ 4 ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು. ಇನ್ನೂ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್‌ ಬೋನ್‌ ಮ್ಯಾರೋ ಕಸಿಗಾಗಿ 4 ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಮಂಜೂರು ಮಾಡಿದರು.

    ಅಲ್ಲದೇ ತುಮಕೂರು ಜಿಲ್ಲೆಯ ಐದು ವರ್ಷದ ಶಾಂಭವಿ ಎಂಬ ಮಗುವಿಗೆ ಶ್ರವಣ ಸಾಧನಕ್ಕಾಗಿ 50 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು. ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ನಾಗರಾಜಯ್ಯ ಅವರು ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿ ಶಿರಾಸಲ್ಲಿ ರೂಢಿದಾರಿಯನ್ನು ಕತ್ತರಿಸಿರುವುದರಿಂದ 5 ಕಿ.ಮೀ ಬಳಸಿಕೊಂಡು ಓಡಾಡಬೇಕಿದೆ. ಇದನ್ನು ಸರಿಪಡಿಸುವಂತೆ ಕೋರಿದರು. ಅರ್ಜಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap