ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಗೌರವಾರ್ಥ ಶನಿವಾರ ಭಾರತದಲ್ಲಿ ಶೋಕಾಚರಣೆ

ಬೆಂಗಳೂರು : ಜಪಾನ್ ದೇಶದ ಮಾಜಿ ಪ್ರಧಾನಿ ಶಿಂಜೋ ಅಬೆ ಅವರು ನಿಧನ ಹೊಂದಿದ್ದಾರೆ. ಅವರಿಗೆ ಗೌರವ ಸೂಚಿಸಲು ಶನಿವಾರ ಒಂದು ದಿನ  ದೇಶ ಮತ್ತು ರಾಜ್ಯದಲ್ಲಿ ಶೋಕಾಚರಣೆ ಆಚರಿಸಲು ಭಾರತ ಸರ್ಕಾರವು ನಿರ್ಧರಿಸಿದೆ.
ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ ಸಹ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು. ಹಾಗಾಗಿ ಸರ್ಕಾರದ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ, ಹಾಗೂ ನಿಯತವಾಗಿ ರಾಷ್ಟ್ರ ಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ಅರ್ಧ ಮಟ್ಟದಲ್ಲಿ ಹಾರಿಸಲು ಸೂಚನೆ ನೀಡಲಾಗಿದೆ.
ಜಪಾನ್ ಪ್ರಧಾನಿ ಹತ್ಯೆಯ ವಿವರ :
ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ ಗುಂಡು ತಗುಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಪಾನ್​ನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಶಿಂಜೋ ಅವರು ಭಾಷಣ ಮಾಡುತ್ತಿರುವಾಗಲೇ ಅವರ ಮೇಲೆ ಗುಂಡು ಹಾರಿಸಲಾಗಿತ್ತು. ಮಾಜಿ ಪ್ರಧಾನಿ ಗುಂಡು ತಗುಲಿ ನೆಲಕ್ಕೆ ಕುಸಿಯುತ್ತಿರುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿವೆ. ಶುಕ್ರವಾರ ಬೆಳಗ್ಗೆ ಘಟನೆ ನಡೆದಿದ್ದು ಅವರನ್ನು ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಶಿಂಜೋ ಅವರು ಭಾರತದ ಜೊತೆ ಉತ್ತಮ ಒಡನಾಟವನ್ನು ಇಟ್ಟುಕೊಂಡಿದ್ದರು.
ಜಪಾನ್ ದೇಶದ ಮಾಜಿ ಪ್ರಧಾನಕ ಶಿಂಜೋ ಅಬೆ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅಬೆ ಜೊತೆಗಿನ ತಮ್ಮ ಒಡನಾಟದ ಬಗ್ಗೆ ಸರಣಿ ಟ್ವೀಟ್​ಗಳನ್ನು ಮಾಡಿದ್ದಾರೆ.
ನನ್ನ ಆತ್ಮೀಯ ಸ್ನೇಹಿತರಲ್ಲಿ ಒಬ್ಬರಾದ ಶಿಂಜೋ ಅಬೆ ಅವರ ದುರಂತ ನಿಧನದಿಂದ ನಾನು ಪದಗಳಲ್ಲಿ ಹೇಳಲಾಗದಷ್ಟು ದುಃಖಿತನಾಗಿದ್ದೇನೆ. ಅವರು ಅತ್ಯುನ್ನತ ಜಾಗತಿಕ ರಾಜಕಾರಣಿಯಾಗಿದ್ದರು, ಅತ್ಯುತ್ತಮ ನಾಯಕ ಮತ್ತು ಆಡಳಿತಗಾರರಾಗಿದ್ದರು. ಜಪಾನ್ ಮತ್ತು ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ಅಗಲಿಕೆಯಿಂದ ವಿಶ್ವಕ್ಕೆ ಭಾರೀ ದೊಡ್ಡ ನಷ್ಟ ಉಂಟಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
-ನರೇಂದ್ರ ಮೋದಿ, ಪ್ರಧಾನ ಮಂತ್ರಿ.

Recent Articles

spot_img

Related Stories

Share via
Copy link