ಬೆಂಗಳೂರು:
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಲುವಾಗಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಸಭೆ ಕರೆಯಲಾಗಿದೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯ ಬಿಎಸ್‍ವೈ ನಿವಾಸದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಜಮಖಂಡಿ ಕ್ಷೇತ್ರದ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಯಲಿದೆ. ಜಮಖಂಡಿಯಿಂದ ಶ್ರೀಕಾಂತ್ ಕುಲಕರ್ಣಿ ಅಖಾಡಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಜಮಖಂಡಿಯಿಂದ ಶ್ರೀಕಾಂತ್ ಕುಲಕರ್ಣಿ ಕಣಕ್ಕಿಳಿದ್ರೆ ಬಿಜೆಪಿಗೆ ಅನುಕೂಲವಾಗಲಿದೆ. ಸಂಗಮೇಶ್ ನಿರಾಣಿ ಅಭ್ಯರ್ಥಿಯಾದ್ರೆ ಗೆಲುವು ಕಷ್ಟ ಅಂತಾ ಬಿಜೆಪಿ ಕಾರ್ಯಕರ್ತರೇ ಹೇಳುತ್ತಿದ್ದಾರೆ. ಶ್ರೀಕಾಂತ್ ಕುಲಕರ್ಣಿ ಪರ ಗೋವಿಂದ ಕಾರಜೋಳ ಬ್ಯಾಟ್ ಮಾಡಿದ್ರೆ. ಸಂಗಮೇಶ್ ನಿರಾಣಿ ಪರ ಮುರುಗೇಶ್ ನಿರಾಣಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ