ಬೆಂಗಳೂರು: ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಭಾಗಿಯಾಗುವ ಉದ್ದೇಶದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ದೆಹಲಿಗೆ ತೆರಳಿದರು.
ಗುರುವಾರ ಬೆಳಗ್ಗೆ ದೆಹಲಿ ವಿಮಾನ ಏರಿದ ಅವರು ಇಂದು ಸಂಜೆ ವಾಪಸ್ ಆಗಲಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ನಡೆಯಲಿರುವ ಜಿ.ಎಸ್.ಟಿ ಕೌನ್ಸಿಲ್ ಸಭೆಯಲ್ಲಿ ಅವರು ಭಾಗಿಯಾಗಲಿದ್ದಾರೆ. ಇದಾದ ಬಳಿಕ ಖಾಸಗಿ ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲೂ ಅವರು ಭಾಗಿಯಾಗಲಿದ್ದಾರೆ.
ಕಾನೂನು ಸುವ್ಯವಸ್ಥೆ ವಿಚಾರವಾಗಿ ಯಾವುದೇ ರಾಜಿ ಇಲ್ಲ; ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ದೆಹಲಿಗೂ ತೆರಳುವ ಮುನ್ನ ಆರ್.ಟಿ ನಗರ ನಿವಾಸದಲ್ಲಿ ಮಾತನಾಡಿದ ಅವರು, ಬೆಳಗ್ಗೆ ದಿಲ್ಲಿಗೆ ಹೋಗಿ ಸಂಜೆ ವಾಪಸ್ ಆಗುತ್ತೇನೆ. ದೆಹಲಿ ಭೇಟಿ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಕುರಿತಾಗಿ ಯಾವುದೇ ಚರ್ಚೆ ನಡೆಸುವುದಿಲ್ಲ. ಅಧಿಕೃತವಾಗಿ ಯಾರನ್ನು ಭೇಟಿ ಆಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಆಗುವುದಿಲ್ಲ ಎಂದು ತಿಳಿಸಿದರು.