ಬೆಂಗಳೂರು ನಗರ ಜಿಲ್ಲೆ : 2022-23ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 18 ರೊಳಗಾಗಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಠಡಿ ಸಂಖ್ಯೆ-17 ಮತ್ತು 18, ಶ್ರೀ. ಕಂಠೀರವ ಹೊರಾಂಗಣ ಕ್ರೀಡಾಂಗಣ, ಕಸ್ತೂರಿಬಾ ರಸ್ತೆ, ಬೆಂಗಳೂರು ನಗರ ಜಿಲ್ಲೆ, ಇಲ್ಲಿ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22239771 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.