ಗುಬ್ಬಿ:
ತಾಲ್ಲೂಕಿನ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಢಾಕೂಟದಲ್ಲಿ ಗುಂಪು ಆಟಗಳು ಮತ್ತು ವಯಕ್ತಿಕ ಸ್ಪರ್ಧೆಗಳಲ್ಲಿ ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗುಂಪು ಆಟಗಳಾದ ವಾಲಿಬಾಲ್ ಪ್ರಥಮಸ್ಥಾನ, ಮೂರು ಸಾವಿರ ಮೀಟರ್ ಓಟ ದ್ವಿತೀಯ ಸ್ಥಾನ, 1500ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಮಾಜ ವಿಜ್ಞಾನ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಸಿ.ಶಿವಣ್ಣ, ದೈಹಿಕ ಶಿಕ್ಷಕ ಶಿವಪ್ರಸಾದ್ ವಿದ್ಯಾರ್ಥಿಗಳೊಂದಿಗೆ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
