ಜಿಲ್ಲೆಗಳಿಗೆ ಉಸ್ತುವಾರಿ ನೇಮಕ : ನಿಮ್ಮ ಜಿಲ್ಲೆ ಉಸ್ತುವಾರಿ ಯಾರು…?

ಬೆಂಗಳೂರು:

     ಸಿಎಂ ಸಿದ್ದರಾಮಯ್ಯ ಕೊನೆಗೂ ತಲೆನೋವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್‌ ಸರ್ಕಾರ, ಅಳೆದು ತೂಗಿ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನು ಶುಕ್ರವಾರ ನೇಮಕ ಮಾಡಿದೆ.

    ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್‌ ಪಣತೊಟ್ಟಿದ್ದು, ಹಲವು ಸಚಿವರು ತಮ್ಮ ತಮ್ಮ ಜಿಲ್ಲೆಯ ಮೇಲೆ ಕಣ್ಣೀಟ್ಟಿದ್ದರು. ಜಿಲ್ಲೆಗಳ ಉಸ್ತುವಾರಿ ಸ್ಥಾನಕ್ಕೆ ಪೈಪೋಟಿ ಶುರುವಾಗಿತ್ತು, ಅದರಲ್ಲೂ ಮುಖ್ಯವಾಗಿ ಒಂದೇ ಜಿಲ್ಲೆಯ ಇಬ್ಬರು ಸಚಿವರುಗಳ ನಡುವೆ ಭಾರೀ ಲಾಬಿಗಳು ನಡೆದಿದ್ದವು.

     ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ತಲೆನೋವಾಗಿತ್ತು. ಆದರೆ, ಇದೀಗ ಎಲ್ಲಾ ಗೊಂದಲಗಳನ್ನು ನಿವಾರಿಸಿ ಅಂತಿಮವಾಗಿ ಜಿಲ್ಲಾ ಉಸ್ತುವಾರಿಗಳನ್ನ ನೇಮಕ ಮಾಡಲಾಗಿದೆ.