ಹಾವೇರಿ:
ಪ್ರಾಥಮಿಕ ಶಾಲೆಯ 14 ಶಿಕ್ಷಕರು ಹಾಗೂ ಪ್ರೌಢಶಾಲೆಯ 07 ಜನ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಮಾಡಿದ್ದು ನಗರದ ಗುರುಭವನದಲ್ಲಿ ಸೆಪ್ಟೆಂಬರ್ 5ರ ಬುಧವಾರ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.
ಪ್ರಾಥಮಿಕ ಶಾಲಾ ವಿಭಾಗ: ಬ್ಯಾಡಗಿ ತಾಲೂಕು ಬನ್ನಿಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎಂ.ಎಂ.ಪಾಟೀಲ, ಕೆಂಗೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಜಿ.ಮಾಗಳ, ಹಾನಗಲ್ ತಾಲೂಕು ಸಾಂವಸಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪಿ.ಎಂ.ಚಲವಾಡಿ, ಗಡಿಯಂಕನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ನಿಂಗಪ್ಪ ಸಾಳುಂಕೆ, ಹಾವೇರಿ ತಾಲೂಕು ಹಂದಿಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ.ವಿ. ಮೇಲ್ಮುರಿ, ಹಾವೇರಿ ಎಸ್.ಎಂ.ಎಸ್.ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಎ.ಬಿ.ಹಾನಗಲ್, ಹಿರೇಕೆರೂರು ತಾಲೂಕಿನ ಬುರಡಿಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಆರ್.ಎನ್.ಕೆಂಗಟ್ಟಿ, ವರಹಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೆ.ಎಸ್.ಪುಟ್ಟಪ್ಪಗೌಡ್ರ, ರಾಣೇಬೆನ್ನೂರ ತಾಲೂಕಿನ ರಾಣೇಬೆನ್ನೂರ ಕನಕದಾಸ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕ ಎಸ್.ಎಚ್.ಪಾಟೀಲ, ಹಿರೇಬಿದರಿ ಪ್ಲಾಟ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎನ್.ಎಂ.ಚವಡಣ್ಣನವರ, ಸವಣೂರ ತಾಲೂಕಿನ ಹೆಸರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎಎನ್.ಎಂ.ಅರಳಿ, ಅರಳಿಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪಿ.ಕೆ. ಇಚ್ಚಂಗಿ, ಶಿಗ್ಗಾಂವ ತಾಲೂಕು ಕೊಟ್ಟಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎಂ.ಎಚ್.ಮೋಮಿನ, ಹಿರೇಬೆಂಡಿಗೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಬಿ.ಎಸ್.ಕರ್ಜಗಿ ಅವರಿಗೆ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರೌಢಶಾಲಾ ವಿಭಾಗ: ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಡಿ.ಚನ್ನಗಿರಿ, ಹಾನಗಲ್ ತಾಲೂಕಿನ ಅರಲೇಶ್ವರ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಚಂದ್ರಶೇಖರ ವಿ., ಹಾವೇರಿ ತಾಲೂಕು ದೇವಿಹೊಸೂರ ಎಸ್.ಎನ್.ಬಿ.ಕೆ.ಪ್ರೌಢಶಾಲೆಯ ದೈಹಿಕ ಶಿಕ್ಷಕ ಡಾ.ವಿಜಯಕುಮಾರ ಎಚ್., ಬಸಾಪುರ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಶ್ರೀಮತಿ ಗೀತಾ ಎಸ್.ಸುತ್ತಕೋಟೆ, ಹಿರೇಕೆರೂರು ತಾಲೂಕಿನ ಶಿರಗಂಬಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಎಚ್.ಎಂ.ಕಟ್ಟಿಮನಿ, ರಾಣೇಬೆನ್ನೂರು ತಾಲೂಕಿನ ಹಲಗೇರಿ ಸರ್ಕಾರಿ ಉರ್ದು ಪ್ರೌಢಶಾಲೆಯ ಸಹ ಶಿಕ್ಷಕ ಎಫ್.ಸಿ.ಬಾಳಿಕಾಯಿ, ಸವಣೂರ ತಾಲೂಕಿನ ಸವಣೂರು ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಹ ಶಿಕ್ಷಕಿ ಬಿ.ಎಸ್.ಬಸರಿಕಟ್ಟಿ, ಶಿಗ್ಗಾಂವ ತಾಲೂಕಿನ ಗಂಜಿಗಟ್ಟಿ ಎಂ.ಡಿ.ಎಸ್.ಆರ್.ಶಾಲೆಯ ಸಹ ಶಿಕ್ಷಕ ಎಸ್.ಎಸ್.ಹೆಬ್ಬಳ್ಳಿ ಅವರಿಗೆ ಪ್ರೌಢಶಾಲಾ ವಿಭಾಗದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
