ಬೆಂಗಳೂರು
ಜೂನ್ 9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ನಾಪೋಕ್ಲು, ಕೊಳ್ಳೇಗಾಲ, ಸರಗೂರು, ಕೊಟ್ಟಿಗೆಹಾರ, ಅರಕಲಗೂಡು, ಮೂರ್ನಾಡು, ಬೀದರ್, ಟಿ ನರಸೀಪುರ, ಕಳಸ, ಮೂಡಿಗೆರೆ, ಮೈಸೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿರಲಿದೆ.
ಹಾಗೆಯೆ ಹವಾಮಾನದಲ್ಲಿ ವೈಪರಿತ್ಯಗಳು ಉಂಟಾದರೆ ಮತ್ತೆ ಕೆಲವು ದಿನಗಳ ಮುಂಗಾರು ವಿಳಂಬ ಆಗಲುಬಹುದು ಎಂದು ಅಂದಾಜು ಮಾಡಲಾಗಿದೆ. ಪ್ರತಿಭಾರಿಯೂ ವಾಡಿಕೆಯಂತೆ ನೈಋತ್ಯ ಮುಂಗಾರು ಮಾರುತುಗಳು ಜೂನ್ 1ರಿಂದ ಕೇರಳ ಪ್ರವೇಶ ಮಾಡುತ್ತಿತ್ತು. ಈ ಮೂಲಕ ಕೆಲವು ದಿನಗಳಲ್ಲಿ ಕರ್ನಾಟಕವನ್ನೂ ಕೂಡ ಪ್ರವೇಶ ಮಾಡುತ್ತಿತ್ತು. ಆದರೆ ಈ ಬಾರಿ ನಾಲ್ಕು ದಿನ ವಿಳಂಬ ಎನ್ನುವಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ