ಜ.19 ರಂದು ಸಿದ್ಧಗಂಗಾ ಶ್ರೀ ಪ್ರಥಮ ಪುಣ್ಯ ಸ್ಮರಣೋತ್ಸವ

ತುಮಕೂರು

ಸಿದ್ಧಗಂಗಾ ಮಠದ ಲಿಂ.ಡಾ.ಶ್ರೀ ಶಿವಕುಮಾರ ಶ್ರೀಗಳ ಪ್ರಥಮ ವರ್ಷದ ಪುಣ್ಯ ಸ್ಮರಣೋತ್ಸವ ಸಮಾರಂಭಕ್ಕೆ ಒಂದು ಲಕ್ಷ ಕ್ಕೂ ಹೆಚ್ಚು ಭಕ್ತಾದಿಗಳು ಬರುವ ನಿರೀಕ್ಷೆಯಿದೆ ಎಂದು ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕ ಎಂ.ಎನ್.ಚನ್ನಬಸಪ್ಪ ತಿಳಿಸಿದರು.

ಸಿದ್ಧಗಂಗಾ ಮಠದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.19 ರಂದು ಶ್ರೀಮಠದಲ್ಲಿ ಸಿದ್ಧಗಂಗಾ ಮಠಾಧ್ಯP್ಷÀ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಲಿಂಗೈಕ್ಯ ಶ್ರೀಗಳ ಪ್ರಥಮ ಪುಣ್ಯ ಸ್ಮರಣೋತ್ಸವ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಶ್ರೀ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷೆ ವಹಿಸುವರು. ಬೆಂಗಳೂರು ಬೇಲಿ ಮಠಾಧ್ಯP್ಷÀ ಶ್ರೀ ಶಿವರುದ್ರ ಸ್ವಾಮೀಜಿ, ಕನಕಪುರ ದೇಗುಲ ಮಠಾಧ್ಯP್ಷÀ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಉಪಸ್ಥಿತರಿರುವರು ಎಂದು ಹೇಳಿದರು.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಸಿ.ಟಿ.ರವಿ, ಸಿ.ಸಿ.ಪಾಟೀಲ್, ವಿ.ಸೋಮಣ್ಣ, ಸಂಸದರಾದ ಜಿ.ಎಸ್.ಬಸವರಾಜ್, ವೈ.ದೇವೇಂದ್ರಪ್ಪ, ಶಾಸಕರಾದ ಡಿ.ಸಿ.ಗೌರಿಶಂಕರ್, ಜಿ.ಬಿ.ಜ್ಯೋತಿಗಣೇಶ್, ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್, ಬಸವರಾಜ ಹೊರಟ್ಟಿ, ಎಸ್.ಟಿ.ಸೋಮಶೇಖರ್, ಕೆ.ಗೋಪಾಲಯ್ಯ, ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್, ಪಾಲಿಕೆ ಮೇಯರ್ ಲಲಿತಾ ರವೀಶ್ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಶ್ರೀಗಳ ಸ್ಮರಣೋತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಜ.21 ರಂದು ಶ್ರೀಮಠದ ವಿದ್ಯಾರ್ಥಿಗಳಿಗೆ ರಜೆ ಇಲ್ಲದ ಕಾರಣ ಜ.19 ರಂದು ಪುಣ್ಯ ಸ್ಮರಣೆ ಆಯೋಜಿಸಲಾಗಿದೆ. ಸಮಾರಂಭಕ್ಕೆ ಬರುವ ಭಕ್ತಾýಗಳಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ವಿದ್ಯಾರ್ಥಿಗಳ ಸೇವೆ ಬೇಕಾಗುತ್ತದೆ. ಹೀಗಾಗಿ ಜ.19 ರಂದು ಸಮಾರಂಭ ಆಯೋಜಿಸಲಾಗಿದೆ ಎಂದರು.

ಸಮಾರಂಭದಲ್ಲಿ ಬೆಂಗಳೂರಿನ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್‍ನಿಂದ ಕಾರ್ಯಸೂಚಿ ಕೈಪಿಡಿ ಮತ್ತು ವೆಬ್‍ಸೈಟ್ ಬಿಡುಗಡೆ ಮಾಡಲಾಗುತ್ತದೆ. ಸಿ.ಎನ್.ಸದಾಶಿವಯ್ಯ ವಿರಚಿತ `ಶ್ರೀಗುರು ಕರುಣೆ ಮತ್ತು ನಿಷ್ಠೆ’ ಕೃತಿ, ಬ್ಯಾಲಕೆರೆ ಶಿವಣ್ಣ ವಿರಚಿತ `ಯೋಗಾಂಗ ತ್ರಿವಿý’ ಮತ್ತು ಮುದ್ದೇ ನಹಳ್ಳಿ ನಂಜಯ್ಯ ವಿರಚಿತ `ಶ್ರೀ ಶಿವಕುಮಾರ ಚರಿತೆ’ ಪುಸ್ತಕ ಬಿಡುಗಡೆಗೊಳಿಸಲಾಗುತ್ತದೆ. ಇದೇ ವೇಳೆ ದೆಹಲಿಯ ಕೈಗಾರಿಕೋದ್ಯಮಿ ಮುಖೇಶ್ ಗರ್ಗ್ ಮತ್ತು ನವದೆಹಲಿ ಉಗ್ರ ನಿಗ್ರಹ ದಳ ಅಧ್ಯಕ್ಷ ಮಣೀಂದರ್‍ಜೀತ್‍ಸಿಂಗ್ ಬಿಟ್ಟ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ಹೇಳಿದರು.

ಆಡಳಿತಾýಕಾರಿ ಎಸ್.ವಿಶ್ವನಾಥಯ್ಯ ಮಾತನಾಡಿ, ಲಿಂಗೈಕ್ಯ ಶ್ರೀಗಳ ಪುಣ್ಯ ಸ್ಮರಣೆ ಸಮಾರಂಭದಲ್ಲಿ ಒಂದು ಲP್ಷÀಕ್ಕೂ ಹೆಚ್ಚು ಭಕ್ತಾýಗಳು ಬರುವ ನಿರೀಕ್ಷೆ ಇದೆ. ಅದಕ್ಕೆ ತಕ್ಕಂತೆ ಶ್ರೀಮಠದಿಮದ ಎಲ್ಲಾ ರೀತಿಯ ತಯಾರಿ ಮಾಡಲಾಗುತ್ತಿದೆ. ಭಕ್ತಾýಗಳಿಗೆ ಶ್ರೀಮಠದ ಏಳು ಕಡೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದ್ದು, ಒಂದು ಬಾರಿ ಹತ್ತು ಸಾವಿರ ಜನ ಕುಳಿತು ಊಟ ಮಾಡಬಹುದು. ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ತಿಂಡಿ, 11.30 ರಿಂದ ರಾತ್ರಿ 11.30 ವರೆಗೂ ಶ್ರೀಮಠಕ್ಕೆ ಬರುವ ಭಕ್ತರಿಗೆ ಸಿಹಿಯೂಟದ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.

ದೆಹಲಿ ಮೂಲದ ಕೈಗಾರಿಕೋದ್ಯಮಿ ಹಾಗೂ ಶ್ರೀಮಠದ ಅಭಿಮಾನಿಯಾದ ಮುಖೇಶ್ ಗರ್ಗ್ ಅವರು 40 ರಿಂದ 50 ಕಿಲೋನ ಲಿಂ.ಶ್ರೀಗಳ ಬೆಳ್ಳಿ ಪುತ್ಥಳಿಯನ್ನು ಮಾಡಿಸಿ ಶ್ರೀಗಳ ಗದ್ದುಗೆಯಲ್ಲಿಡಲು ವ್ಯವಸ್ಥೆ ಮಾಡಿದ್ದಾರೆ. ಎಂದಿನಂತೆ ಶ್ರೀಗಳ ಗದ್ದುಗೆಯಲ್ಲಿ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಎಸ್.ಐ.ಟಿ ಕಾರ್ಯದರ್ಶಿ ಟಿ.ಕೆ.ನಂಜುಡಪ್ಪ, ಸಿಇಒ ಶಿವಕುಮಾರಯ್ಯ, ಮೋಹನ್ ಮತ್ತಿತರಿದ್ದರು.

Recent Articles

spot_img

Related Stories

Share via
Copy link