ಶಿಗ್ಗಾವಿ :
ಟಾಟಾ ಏಸ್ ಮತ್ತು ಬೈಕ್ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ತೀವ್ರಘಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ರಾತ್ರಿ ತಾಲೂಕಿನ ಬಿಸನಳ್ಳಿ ಗ್ರಾಮದ ಹತ್ತಿರ ಸಂಭವಿಸಿದೆ.
ಮೃತ ದುರ್ಧವಿಯನ್ನು ರಾಣೆಬೆನ್ನೂರಿನ ಸರ್ಫರಾಜ ಕಲಂದರಸಾಬ ಕೊತ್ವಾಲ (26) ಎಂದು ತಿಳಿದುಬಂದಿದೆ. ಬೈಕ್ ಸವಾರ ರಾಣೆಬೆನ್ನೂರಿನಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದ್ದು ಟಾಟಾ ಏಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ