ಬೆಂಗಳೂರು
ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕೈಬಿಡುವ ಮಾತೇ ಇಲ್ಲ, ಸರ್ಕಾರದಿಂದ ಜಯಂತಿ ಆಚರಿಸಲು ಮುಖ್ಯಮಂತ್ರಿ ಎಚ್,ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿ ಆಚರಣೆ ಸರ್ಕಾರದ ಕರ್ತವ್ಯ. ಒಂದು ವೇಳೆ ಆಚರಣೆಯ ಸಂದರ್ಭದಲ್ಲಿ ಅದನ್ನು ವಿರೋಧಿಸಿ ಏನಾದರೂ ಅನಾಹುತ ಸಂಭವಿಸಿದರೆ ಬಿಜೆಪಿಯೇ ಹೊಣೆ ಎಂದು ನೇರವಾಗಿ ಎಚ್ಚರಿಕೆ ನೀಡಿದರು.
ಈಗಾಗಲೇ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಅವರು ಟಿಪ್ಪು ಜಂಯತಿ ಮಾಡುವುದಾಗಿ ತಿಳಿಸಿದ್ದಾರೆ. ಸ್ವಾತಂತ್ರ ವೀರ ಯೋಧ ಟಿಪ್ಪು ಜಯಂತಿ ಆಚರಣೆ ಶುರುವಾದದ್ದು ಹಿಂದಿನ ಸರ್ಕಾರದ ಅವಧಿಯಲ್ಲಿ. ಹೀಗಾಗಿ ಈ ವರ್ಷವೂ ಆಚರಣೆ ಮುಂದುವರೆಸುವುದು ನಮ್ಮೆಲ್ಲರ ಹೊಣೆ ಎಂದು ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ