ಬೆಂಗಳೂರು
ಬನ್ನೇರುಘಟ್ಟ ನೈಸ್ ರಸ್ತೆ ಬಳಿಯ ಟಿ.ಜಾನ್ ಕಾಲೇಜಿನ ಆವರಣದಲ್ಲಿಯೇ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಮಾರಮಾರಿ ನಡೆದು ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಳೆದ ಸೆಪ್ಟೆಂಬರ್ 20ರಂದು ಟಿ.ಜಾನ್ ಕಾಲೇಜು ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡಿದ್ದು ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಬಾರಿಯು ಸಹ ಇದೆ ಕಾಲೇಜಿನ ಸೀನಿಯರ್ ವಿದ್ಯಾರ್ಥಿಗಳಿಂದ ಜೂನಿಯರ್ ವಿದ್ಯಾರ್ಥಿಗಳ ಮೇಲೆ ರ?ಯಾಗಿಂಗ್ ನಡೆದ ಗಲಾಟೆ ಆಗಿತ್ತು. ಈಗ ಮತ್ತೆ ರ್ಯಾಗಿಂಗ್ ನಡೆದು ಗಲಾಟೆ ನಡೆದಿದೆ.
ಕೆಲವು ದಿನಗಳ ಹಿಂದೆ ಜೂನಿಯರ್ ವಿದ್ಯಾರ್ಥಿಗಳಿಗೆ ಹಾಗಲಕಾಯಿ ಜ್ಯೂಸ್ ಕುಡಿಯುವಂತೆ ಹಾಗು ಮಕ್ಕಳ ವೇಷಧರಿಸಿ ಬರುವಂತೆ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದಾರೆ. ಈ ವೇಳೆ ಕೆಲವು ವಿದ್ಯಾರ್ಥಿಗಳು ಸೀನಿಯರ್ ಹೇಳಿದಂತೆ ಮಾಡಿದ್ದಾರೆ. ಆದರೆ ಕೆಲವು ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ್ದು ಜಗಳಕ್ಕೆ ತಿರುಗಿ ಹಿರಿಕಿರಿಯ ವಿದ್ಯಾರ್ಥಿಗಳ ನಡುವೆ ಮಾರಮಾರಿ ನಡೆದಿದೆ.
ಸುಮಾರು 70 ವಿದ್ಯಾರ್ಥಿಗಳ ನಡುವೆ ಮಾರಮಾರಿ ನಡೆದಿದೆ. ಕೆಲವು ವಿದ್ಯಾರ್ಥಿಗಳಿಗೆ ಈ ಗಲಾಟೆಯಲ್ಲಿ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆದ್ರೆ ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿಯನ್ನು ಕೇಳಿದರೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲು ನಿರಾಕರಿಸಿದ್ದಾರೆ .
ಅಷ್ಟೇ ಅಲ್ಲದೇ ಈ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳು ಮಾದಕ ವ್ಯಸನಿಗಳಿಗೆ ಮಾರು ಹೋಗುತ್ತಿದ್ದಾರೆ ಎಂದು ಸ್ಥಳಿಯರು ಹೇಳುತ್ತಿದ್ದಾರೆ . ಈ ಬಗ್ಗೆ ಪೋಷಕರು ಹೇಳಿದರೂ ಕಾಲೇಜು ಆಡಳಿತ ಮಂಡಳಿ ಮಾತ್ರ ರ್ಯಾಗಿಂಗ್ ನಡೆಯುತ್ತಿದ್ದರು ಕಣ್ಮುಚ್ಚಿ ಕುಳಿತಿದೆ. ಇದುವರೆಗೂ ಯಾವುದೇ ರೀತಿಯ ಸೂಕ್ತ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ದೂರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
