ಸೌತಾಂಪ್ಟನ್:

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ 6000 ರನ್ಗಳ ಮೈಲುಗಲ್ಲನ್ನು ತಲುಪಿದ್ದಾರೆ.ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಈ ಸ್ಮರಣೀಯ ಮೈಲುಗಲ್ಲು ತಲುಪಿದ್ದಾರೆ.ಈ ಮೂಲಕ ಮಾಜಿ ದಿಗ್ಗಜ ಸುನಿಲ್ ಗವಾಸ್ಕರ್ ಬಳಿಕ ಅತಿ ವೇಗದಲ್ಲಿ 6000 ರನ್ ಗಳಿಸಿದ ಎರಡನೇ ಭಾರತೀಯ ಬ್ಯಾಟ್ಸ್ಮನ್ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.ವಿರಾಟ್ ಕೊಹ್ಲಿ 119ನೇ ಇನ್ನಿಂಗ್ಸ್ನಲ್ಲಿ 6000 ಮೈಲುಗಲನ್ನು ತಲುಪಿದ್ದಾರೆ. ಜಕಾರ್ತ: ಹಾಲಿ ಚಾಂಪಿಯನ್ನರು ಸೆಮಿಫೈನಲ್ನಲ್ಲಿ ನಿರಾಸೆ ಅನುಭವಿಸಿದರು. ಶುಕ್ರವಾರ ನಡೆದ ಪುರುಷರ ಸ್ಕ್ವಾಷ್ ತಂಡ ವಿಭಾಗದ ನಾಲ್ಕರ ಘಟ್ಟದ ಪಂದ್ಯದಲ್ಲಿ ಹಾಂಕಾಂಗ್ ಎದುರು 0–2ರಿಂದ ಸೋತ ಭಾರತ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








