ದಾವಣಗೆರೆ:
ಚಲಿಸುತ್ತಿದ್ದ ಕಾರಿನ ಟೈಯರ್ ಸಿಡಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ಪಕ್ಕದ ಗುಂಡಿಗೆ ಕಾರು ಇಳಿದಿದ್ದರಿಂದ ಕಾರಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ತಾಲೂಕಿನ ಬಾತಿ ರೈಸ್ ಮಿಲ್ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಮಂಗಳವಾರ ಸಂಭವಿಸಿದೆ.
ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಮಾರುತಿ ಅಲ್ಟೋ ಕಾರಿನ ಹಿಂಭಾಗದ ಗಾಲಿ ಸಿಡಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಗುಂಡಿಗೆ ನುಗ್ಗಿದ್ದರಿಂದ ಕಾರಿನಲ್ಲಿದ್ದ ಓರ್ವ ಬಾಲಕಿ, ಮೂವರು ಮಹಿಳೆಯರಿಗೆ ತೀವ್ರ ಪೆಟ್ಟಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ಅಪಘಾತಕ್ಕೀಡಾಗುತ್ತಿದ್ದಂತೆ ಸ್ಥಳೀಯರು, ರೈತರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಕಾರಿನಿಂದ ಹೊರಗೆ ಇಳಿಸಿದರು. ಈ ಕುರಿತು ವಿದ್ಯಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕಟಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ