ಡಿಕೆಶಿಗೆ ರಿಲೀಫ್‌ ನೀಡಿದ ಸುಪ್ರೀಂ : ಅಷ್ಟಕ್ಕೂ ಸುಪ್ರೀಂ ಹೇಳಿದ್ದೇನು….?

ನವದೆಹಲಿ:

      ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. 

     ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಮೂರ್ತಿ ಸಿಟಿ ರವಿಕುಮಾರ್ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ಈ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಫೆಬ್ರುವರಿ 10 ರಂದು ನೀಡಿದ್ದ ಆದೇಶದ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

    ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಮಾತನಾಡಿ, ಸಂಸ್ಥೆಯ ಪರವಾಗಿ ಆದೇಶವಿದ್ದರೂ, ಹೈಕೋರ್ಟ್‌ನ ವಿಭಾಗೀಯ ಪೀಠವು ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ ಎಂದರು.

    ಆಗ ಸುಪ್ರೀಂ ಕೋರ್ಟ್ ಪೀಠವು, ಈ ವಿಚಾರದಲ್ಲಿ ತಾನು ಮಧ್ಯಪ್ರವೇಶಿಸಲು ಹೋಗುವುದಿಲ್ಲ ಎಂದಿತು ಮತ್ತು ತನ್ನ ಮುಂದಿರುವ ಪ್ರಕರಣವನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಹೈಕೋರ್ಟ್‌ಗೆ ಮನವಿ ಮಾಡಲು ಸಿಬಿಐಗೆ ಅವಕಾಶ ನೀಡಿತು.
   ಫೆಬ್ರುವರಿ 10 ರಂದು ಕರ್ನಾಟಕ ಹೈಕೋರ್ಟ್ ಡಿಕೆ ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಕ್ರಮ ಕೈಗೊಂಡಿರುವ ವರದಿಯನ್ನು ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೆ, ಶಿವಕುಮಾರ್ ವಿರುದ್ಧ ದಾಖಲಾಗಿರುವ ಪ್ರಕರಣಗಳು 2020ರದ್ದಾಗಿವೆ ಎಂದು ಸೂಚಿಸಿದ ಹೈಕೋರ್ಟ್, ಕಳೆದ ಎರಡು ವರ್ಷಗಳ ತನಿಖೆಯ ಪ್ರಗತಿ ಕುರಿತು ಸಿಬಿಐ ಅನ್ನು ಪ್ರಶ್ನಿಸಿದೆ.

ಅಂತಿಮ ವರದಿಯನ್ನು ಯಾವಾಗ ಸಲ್ಲಿಸುತ್ತೀರಿ ಎಂದು ಹೈಕೋರ್ಟ್ ತನಿಖಾ ಸಂಸ್ಥೆಯನ್ನು ಕೇಳಿದ್ದು, ಮುಂದಿನ ವಿಚಾರಣೆವರೆಗೆ ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಸಿಬಿಐ ವಿಚಾರಣೆಗೆ ತಡೆ ನೀಡಿ ಪ್ರಕರಣವನ್ನು ಮುಂದೂಡಿದೆ.

    ಶಿವಕುಮಾರ್ ಮೇಲೆ ಆದಾಯ ತೆರಿಗೆ ಇಲಾಖೆ 2017ರಲ್ಲಿ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿಯನ್ನು ಆದರಿಸಿ ಜಾರಿ ನಿರ್ದೇಶನಾಲಯವು (ಇ.ಡಿ) ಶಿವಕುಮಾರ್ ವಿರುದ್ಧ ತನಿಖೆ ಆರಂಭಿಸಿದೆ.

    ಇ.ಡಿ ತನಿಖೆಯನ್ನು ಆಧರಿಸಿ, ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿ ಕೋರಿತ್ತು. ಈ ಸಂಬಂಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ 2019ರ ಸೆಪ್ಟೆಂಬರ್ 25ರಂದು ಅಧಿಸೂಚನೆ ಹೊರಡಿಸಿತ್ತು ಮತ್ತು 2020ರ ಅಕ್ಟೋಬರ್ 3ರಂದು ಸಿಬಿಐ ಎಫ್ಐಆರ್ ದಾಖಲಿಸಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap