ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯಸಭೆ ನೂತನ ಸದಸ್ಯರಾಗಿ ನಾಮಕರಣಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿರುವ ಧರ್ಮಾಧಿಕಾರಿಗಳ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿ, ಅಶೀರ್ವಾದ ಪಡೆದರು. ಡಾ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಸುರೇಂದ್ರ ಕುಮಾರ್ ಹಾಗೂ ಕುಟುಂಬ ಸದಸ್ಯರು ಇದ್ದರು.