ಡಿಕೆಶಿ ಹಾಗು ನನ್ನ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಸಂಚು : ಸಿದ್ದರಾಮಯ್ಯ

ಬೆಂಗಳೂರು

     ರಾಜ್ಯ ಕಾಂಗ್ರೆಸ್‌ನಲ್ಲಿ ನಡೆದಿರುವ ವಿದ್ಯಮಾನಗಳ ಬಗ್ಗೆಯಾಗಲೀ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬಗ್ಗೆ ನಾನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಯಾವುದೇ ಪತ್ರ ಬರೆದಿಲ್ಲ. ಕೆಲವು ಕುತಂತ್ರಿಗಳು ನನ್ನ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಈ ನಕಲಿ ಪತ್ರ ಸೃಷ್ಠಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

    ಎಐಸಿಸಿ ಅಧ್ಯಕ್ಷರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಡಿ.ಕೆ. ಶಿವಕುಮಾರ್ ವಿರುದ್ಧ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಬೆಂಗಳೂರಿನಲ್ಲಿAದು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಈ ಪತ್ರ ನಾನು ಬರೆದಿಲ್ಲ. ಇದು ನಕಲಿ ಎಂದರು.

     ಈ ನಕಲಿ ಪತ್ರವನ್ನು ಆರ್‌ಎಸ್‌ಎಸ್‌ನವರು ಬರೆದು ಕುತಂತ್ರ ನಡೆಸಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರು, ಈ ಪತ್ರ ಯಾರು ಬರೆದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ದೂರು ನೀಡುವುದಾಗಿಯೂ ಹೇಳಿದರು.

    ಈ ಪತ್ರದ ಹಿಂದೆ ಯಾರಿದ್ದಾರೆ, ಇದರಲ್ಲಿ ಯಾರ ಕೈವಾಡವಿದೆ ಎಂಬುದರ ಬಗ್ಗೆ ಪೊಲೀಸರ ತನಿಖೆಯಿಂದ ಸತ್ಯ ಹೊರ ಬರುತ್ತದೆ ಎಂದು ಹೇಳಿದ ಅವರು, ಈ ನಕಲಿ ಪತ್ರದ ಬಗ್ಗೆ ಚುನಾವಣಾ ಆಯೋಗಕ್ಕೂ ದೂರು ನೀಡುತ್ತೇನೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap