ತಮಿಳುನಾಡಿಗೆ ಹರಿಯುತ್ತಿದ್ದ ನೀರಿನ ಮಟ್ಟ ಇಳಿಕೆ…!

ಬೆಂಗಳೂರು:

     ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿರೋಧ ಪಕ್ಷ ಹಾಗೂ ರೈತರಿಂದ ತೀವ್ರ ವಿರೋಧಗಳು ವ್ಯಕ್ತವಾದ ಬೆನ್ನಲ್ಲೇ, ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಮಟ್ಟವನ್ನು ಇಳಿಕೆ ಮಾಡಿದೆ.

    ಸರ್ವಪಕ್ಷ ಸಭೆ ಬಳಿಕ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಪ್ರಮಾಣವನ್ನು ಇಳಿಕೆ ಮಾಡಿದೆ. ಈ ಬೆಳವಣಿಗೆ ರೈತರಲ್ಲಿ ತುಸು ಸಮಾಧಾನವನ್ನು ನೀಡಿದೆ.

    ನೀರಾವರಿ ಇಲಾಖೆ ಅಧಿಕಾರಿಗಳು 6,000 ಕ್ಯೂಸೆಕ್‌ಗೂ ಹೆಚ್ಚು ನೀರನ್ನು ಬಿಡುಗಡೆ ಮಾಡಿದ್ದರಿಂದ ಜಲಾಶಯದ ಮಟ್ಟ 2,281 ಅಡಿಯಿಂದ 2,276 ಅಡಿಗೆ ಇಳಿದಿದೆ.

   
     ಕರ್ನಾಟಕ ಮತ್ತು ಕೇರಳದ ಕಾವೇರಿ ಕಣಿವೆಯ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್‌ ವೈಫಲ್ಯದಿಂದಾಗಿ 2023-24ರ ಜಲ ವರ್ಷವು ಸಂಕಷ್ಟದ ವರ್ಷವಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜೂನ್‌ ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್‌ 10 ರಂದು 1,5000 ಕ್ಯುಸೆಕ್‌ ನೀರು ಬಿಡಲು ಸೂಚಿಸಿತು. ಇದನ್ನು ರಾಜ್ಯ ಬಲವಾಗಿ ವಿರೋಧಿಸಿದ್ದು, ನೀರಿನ ಪ್ರಮಾಣ 10,000 ಕ್ಯುಸೆಕ್‌ಗೆ ಇಳಿಕೆ ಮಾಡಿದೆ. ಇದರಿಂದ ಅಸಮಾಧಾನಗೊಂಡ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದು, ಶುಕ್ರವಾರ ಮೂರು ನ್ಯಾಯಾಧೀಶರ ಪೀಠದ ಮುಂದೆ ವಿಚಾರಣೆಗೆ ಬರಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link