ಬಳ್ಳಾರಿ:
ಮಹಿಳಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 26 ವರ್ಷದ ಶಿವಕ್ಕ ಮತ್ತು 18 ತಿಂಗಳಿನ ಜಿತೇಂದ್ರ ಎಂಬ ಮಗು ಕಾಣೆಯಾದ ಬಗ್ಗೆ ದೂರು ದಾಖಲಾಗಿದೆ ಎಂದು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ.
ಶಿವಕ್ಕನ ಗುರುತು:-
5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಕಪ್ಪು ಮೈಬಣ್ಣ ಹೊಂದಿರುತ್ತಾಳೆ. ಕನ್ನಡ, ತೆಲುಗು, ಹಿಂದಿ ಭಾಷೆಯನ್ನು ಮಾತನಾಡುತ್ತಾಳೆ.
ಜಿತೇಂದ್ರ ಗುರುತು:
1.5 ಅಡಿ ಎತ್ತರ ಸಾಧಾರಣ ಮೈಕಟ್ಟು, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿರುತ್ತಾನೆ. ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಕೂಡಲೇ ಹತ್ತಿರವಿರುವ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ