ಹಾವೇರಿ:
ರಾಷ್ಟ್ರೀಯ ಪೋಷಣಾ ಅಭಿಯಾನದಡಿ ಸಮುದಾಯ ಆಧಾರಿತ ಚಟುವಟಿಕೆಗಳ ಹಾವೇರಿ ತಾಲೂಕ ಮಟ್ಟದ ಪೋಷಣಾ ಅಭಿಯಾನ ಜನಾಂದೋಲನ ಕಾರ್ಯಕ್ರಮಕ್ಕೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಶಾಸಕರಾದ ನೆಹರು ಓಲೇಕಾರ ಅವರು ಚಾಲನೆ ನೀಡಿದರು.
ಅವರು ಮಾತನಾಡಿ ಮಾತೃ ಪೂರ್ಣ ಯೋಜನೆಯ ಕುರಿತು ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ವಿತರಿಸುವ ಬಿಸಿಯೂಟ ಹಾಗೂ ಕಬ್ಬಿಣ ಅಂಶ ಮಾತ್ರೆ, ಹಸಿರುಸೊಪ್ಪು ತರಕಾರಿ, ಮೊಳಕೆಕಾಳು, ಹಣ್ಣುಗಳಲ್ಲಿರುವ ಪೋಷಕಾಂಶಗಳ ಪ್ರಯೋಜನದ ಕುರಿತು ತಿಳಿಸಿ ನಿಯಮಿತವಾಗಿ ಸೇವಿಸುವಂತೆ ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ಮಕ್ಕಳ ಶಿಕ್ಷಣಕ್ಕೆ ಭದ್ರಬುನಾದಿ ಹಾಕಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಾವೇರಿ ತಾಲೂಕಿನ ಎ.ಪಿ.ಎಮ್.ಸಿ ಅಧ್ಯಕ್ಷ ಗೌಡಜ್ಜ ಗೌಡಪ್ಪನವರ, ಹಿರಿಯ ಆರೋಗ್ಯ ಕಾರ್ಯಕರ್ತೆ ಶ್ರೀಮತಿ ವಸಂತ ಕುಮಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮಾ.ಕೆ.ಎಸ್, ಅಂಗನವಾಡಿ ಕಾರ್ಯಕರ್ತೆಯರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ