ಹೊನ್ನಾಳಿ:
ತಾಪಂ ಇಒ ಕೆ.ಸಿ. ಮಲ್ಲಿಕಾರ್ಜುನ್ ಮಾ.31ರಂದು ವಯೋ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಜಿಪಂ ಸಿಇಒ ಆದೇಶದ ಮೇರೆಗೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಎಚ್.ವಿ. ರಾಘವೇಂದ್ರ ಶುಕ್ರವಾರ ಪ್ರಭಾರ ಇಒ ಆಗಿ ಅಧಿಕಾರ ವಹಿಸಿಕೊಂಡರು.
ಎಚ್.ವಿ. ರಾಘವೇಂದ್ರ ಕಳೆದ ನಾಲ್ಕು ವರ್ಷಗಳಿಂದ ಹೊನ್ನಾಳಿ ತಾಪಂ ಕಚೇರಿಯಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.