ಬೆಂಗಳೂರು:
ಜನತಾದರ್ಶನ ಕಾರ್ಯಕ್ರಮವನ್ನು ತಿಂಗಳಿಗೊಮ್ಮೆ ನಡೆಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರಿಗೆ ವೈದ್ಯರು ಸಲಹೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಇನ್ನುಮುಂದೆ ಜನತಾದರ್ಶನ ಕಾರ್ಯಕ್ರಮ ತಿಂಗಳಿಗೊಮ್ಮೆ ನಡೆಯಲಿದೆ. ಒಂದು ತಿಂಗಳು ಬೆಂಗಳೂರಿನಲ್ಲಿ ಒಂದು ತಿಂಗಳು ಜಿಲ್ಲಾ ಕೇಂದ್ರದಲ್ಲಿ ಜನತಾದರ್ಶನ ನಡೆಸಲಾಗುವುದು. ದಿನಾಂಕ ಹಾಗೂ ಸ್ಥಳವನ್ನು ಮುಂಚಿತವಾಗಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.ಈ ಮಧ್ಯೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿದ್ದಾಗ ಜಿಲ್ಲಾವಾರು ಶಾಸಕರ ಸಭೆ ನಡೆಸಲಿದ್ದಾರೆ.
ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಭೋಜನದೊಂದಿಗೆ ನಡೆಸಲಿರುವ ಈ ಸಭೆಯಲ್ಲಿ ಜಿಲ್ಲೆಯ ಸ್ಥಳೀಯ ಸಮಸ್ಯೆಗಳು ಮತ್ತು ಅಭಿವೃದ್ಧಿ ಕೆಲಸಗಳ ಕುರಿತಂತೆ ಚರ್ಚಿಸಲು ತೀರ್ಮಾನಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
