ಬೆಂಗಳೂರಿನ : ಕನಕಪುರ ರಸ್ತೆ ವಸಂತಪುರದಲ್ಲಿ ಇಸ್ಕಾನ್ ಸಂಸ್ಥೆ ವತಿಯಿಂದ ನಿರ್ಮಾಣ ಮಾಡಲಾಗಿರುವ ತಿರುಮಲ ಮಾದರಿಯ ಶ್ರೀ ರಾಜಾಧಿರಾಜ ಗೋವಿಂದ ದೇವಸ್ಥಾನವನ್ನು ಗೌರವಾನ್ವಿತ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರು ಲೋಕಾರ್ಪಣೆ ಮಾಡಿದರು.
ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳ ಧರ್ಮಪತ್ನಿ ಸವಿತಾ ಕೋವಿಂದ್, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಎಂ ಕೃಷ್ಣಪ್ಪ, ಇಸ್ಕಾನ್ ಸಂಸ್ಥೆಯ ಅಧ್ಯಕ್ಷ ಮಧುಪಂಡಿತ ದಾಸ್ ಮತ್ತು ಇತರರು ಉಪಸ್ಥಿತರಿದ್ದರು.