ತುಮಕೂರು:
ತುಮಕೂರಿನಿಂದ ದೇವೇಗೌಡರು ಸ್ಪರ್ಧೆ ಮಾಡಿದಲ್ಲಿ ಅವರನ್ನು ಸೋಲಿಸುತ್ತೇವೆ. ಸಂಸದ ಮುದ್ದಹನುಮೇಗೌಡರಿಗೆ ಟಿಕೆಟ್ ಕೊಡಲೇಬೇಕು ಎಂದು ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಆಗ್ರಹಿಸಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ದೇವೇಗೌಡರು ತುಮಕೂರಿನಿಂದಲೂ ಕಣಕ್ಕೆ ಇಳಿಯಬಹುದು ಎನ್ನುವ ಮಾತುಗಳು ಕೇಳಿ ಬಂದ ಹಿನ್ನೆಲೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಸಂಸದ ಮುದ್ದಹನುಮೇಗೌಡರ ರವರು ಹೆಚ್ಚು ಕ್ರಿಯಾಶೀಲರಾಗಿ ಸಂಸತ್ ನಲ್ಲಿ ಮಾತನಾಡಿದ್ದಾರೆ. ಅಂಥವರಿಗೇ ಟಿಕೆಟ್ ತಪ್ಪಿಸುವುದು ಅಂದರೆ ಏನಿದು. ಇದರ ಹಿಂದುಗಡೆ ಏನಿದೆ ಎಂಬುದು ನಮಗೆ ಬೇಕಿಲ್ಲ. ಸಮ್ಮಿಶ್ರ ಸರ್ಕಾರ ಬೇರೆ ಜಿಲ್ಲೆಗಳಿಗೆ, ನಮ್ಮ ಜಿಲ್ಲೆಗೆ ಏನಿದ್ರೂ ಕಾಂಗ್ರೆಸ್ ಮಾತ್ರ. ಹೈ ಕಮಾಂಡ್ ನಿರ್ಧಾರ ಅವರೇ ಸ್ವಾಗತಿಸಬೇಕು. ನಾವು ಸ್ವಾಗತ ಮಾಡುವುದಿಲ್ಲ. ಜೆಡಿಎಸ್ ಗೆ ಟಿಕೆಟ್ ನೀಡಿದ್ರೆ ನಾವೇ ಗೌಡರನ್ನು ಸೋಲಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಏಪ್ರಿಲ್ 18 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದ್ದು, 2ನೇ ಹಂತದ ಚುನಾವಣೆ ಏಪ್ರಿಲ್ 23 ರಂದು ನಡೆಯಲಿದೆ. ಮೇ 23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ