ತೆಲಂಗಾಣ;
ಅವಧಿಗೂ ಮುನ್ನ ವಿಧಾನಸಭೆ ವಿಸರ್ಜಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರರಾವ್ ತಿಳಿಸಿದ್ದಾರೆ.
2014 ರ ಜೂನ್‍ನಲ್ಲಿ ಈ ವಿಧಾನಸಭಾ ಚುನಾವಣೆ ನಡೆದಿತ್ತು. ಈ ವಿಧಾನಸಭಾ ಚುನಾವಣೆಯು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಡೆಯಬೇಕಿತ್ತು. ಆದರೆ, ಆ ವೇಳೆಯಲ್ಲಿ ಸಾಧ್ಯವಾಗಲಿಲ್ಲ. ಆದರೆ, ಈಗ ಅವಧಿಗೂ ಮುನ್ನ ಅಂದರೆ, 9 ತಿಂಗಳು ಮುನ್ನ ವಿಧಾನಸಭೆ ವಿಸರ್ಜಿಸಲು ನಿರ್ಧರಿಸಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು.








