ನಟ ದರ್ಶನ್ ಮತ್ತು ಸಹಚರರನ್ನು ಈಗ ಬೇರೆ ಬೇರೆ ಜೈಲಿಗೆ ವರ್ಗಾಯಿಸಲು ಕೋರ್ಟ್ ಆದೇಶ ನೀಡಿದೆ.ಆದರೆ ಇದಕ್ಕೆ ಮೊದಲು ದರ್ಶನ್ ಆಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಮತ್ತೆ ನ್ಯಾಯಾಧೀಶರ ಮುಂದೆ ಹಾಜರಾಗಬೇಕಿದೆ. ಹಿಗಾಗಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕವೇ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ.
ನ್ಯಾಯಾಲಯ ಇಂದೂ ಕೂಡಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸುವ ಸಾಧ್ಯತೆಯಿದೆ. ಇದರಿಂದಾಗಿ ದರ್ಶನ್ ಬಳ್ಳಾರಿ ಜೈಲಿನಲ್ಲಿ ಕಳೆಯುವುದು ಬಹುತೇಕ ನಿಶ್ಚಿತವಾಗಿದೆ. ಅಲ್ಲದೆ ಅವರ ವಿರುದ್ಧ ಈಗ ಹೊಸದಾಗಿ ಎರಡು ಪ್ರಕರಣ ದಾಖಲಾಗಿದ್ದು, ಅದರ ವಿಚಾರಣೆಯೂ ನಡೆಯಲಿದೆ.